ನವದೆಹಲಿ: ಕೊರೊನಾ ವೈರಸ್ ಸಂಕಷ್ಟದ ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ನೀಡುವುದನ್ನು ಮುಂದುವರೆಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಒಬ್ಬಂಟಿಯಾಗಿ ವಾಸಿಸುತ್ತಿರುವ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕಾಲದಲ್ಲಿ ಅಗತ್ಯವಾದ ಪಿಂಚಣಿ, ಆಹಾರ, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಕೊರೊನಾ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ಹಿರಿಯ ನಾಗರಿಕರ ನೆರವಿಗೆ ಬರುವಂತೆ ಎಂದು ಹೇಳಿದೆ.



