ಹೈದರಾಬಾದ್: ದೇಶದಲ್ಲಿ ಇತ್ತೀಚೆಗೆ ನಟ-ನಟಿಯರು ಆತ್ಮಹತ್ಯೆಯ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ತೆಲುಗಿನ ಧಾರಾವಾಹಿ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ
ತೆಲುಗಿನ ಸೀರಿಯಲ್ ಗಳಲ್ಲಿ ಅಭಿನಯಿಸುತ್ತಿದ್ದ ಶ್ರಾವಣಿ ಅವರು ಹೈದಾರಾಬಾದ್ ನ ಮಧುರಾನಗರದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ಹೋಗಿದ್ದರು. ತುಂಬಾ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದರು.
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರಾವಣಿ ಪೋಷಕರು ಎಸ್‍ಆರ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.



