Connect with us

Dvgsuddi Kannada | online news portal | Kannada news online

1 ರಿಂದ 5 ನೇ ತರಗತಿ ವರೆಗಿನ ಆನ್ ಲೈನ್ ಶಿಕ್ಷಣ ರದ್ದು: ಸುರೇಶ್ ಕುಮಾರ್

ಪ್ರಮುಖ ಸುದ್ದಿ

1 ರಿಂದ 5 ನೇ ತರಗತಿ ವರೆಗಿನ ಆನ್ ಲೈನ್ ಶಿಕ್ಷಣ ರದ್ದು: ಸುರೇಶ್ ಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು: ಎಲ್ ಕೆ ಜಿ, ಯುಕೆಜಿ, ಪ್ರಾಥಮಿಕ ಶಿಕ್ಷಣದಲ್ಲಿ ಆನ್ ಲೈನ್ ಶಿಕ್ಷಣ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಪ್ರಾಥಮಿಕ ಹಂತದದಲ್ಲಿ ಆನ್ ಲೈನ್ ಶಿಕ್ಷಣ ಕುರಿತು ತಜ್ಞರೊಂದಿಗಿನ ಅಭಿಪ್ರಾಯ ಸಂಗ್ರಹದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಆನ್ ಲೈನ್ ಶಿಕ್ಷಣ ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಯಾವುದೇ ಶಾಲೆಯಲ್ಲಿ ಆನ್ ಲೈನ್ ಶಿಕ್ಷಣ ನಡೆಸುವಂತಿಲ್ಲ. ಆನ್ ಲೈನ್ ಶಿಕ್ಷಣ  ಹೆಸರಲ್ಲಿ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ಇಡೀ ದೇಶದಲ್ಲಿ ಜನರು ಕೊರೊನಾ ವೈರಸ್ ನಿಂದ ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಲೆ, ಕಾಲೇಜು ಗಳಲ್ಲಿ ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಮಾನವೀಯತೆ ದೃಷ್ಟಿಯಿಂದ ಈಗಿರುವ ಶುಲ್ಕದಲ್ಲಿ ಕಡಿಮೆ ಮಾಡಬಹುದು. ಇಲ್ಲವೇ ವಿಳಂಬವಾಗಿ ಪ್ರಾರಂಭವಾಗಿರುವುದಕ್ಕೆ ಅರ್ಧ ಶುಲ್ಕ ತಗೆದುಕೊಂಡರೂ ಒಳ್ಳೆಯದು ಎಂದರು.

ಇನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 25 ರಿಂದ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗದೇ ಪರೀಕ್ಷೆ ಕಡೆ ಗಮನಹರಿಸಿ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top