Connect with us

Dvgsuddi Kannada | online news portal | Kannada news online

ಸಚಿವ ಮಾಧುಸ್ವಾಮಿ ಎಡವಟ್ಟು; 6,7ತರಗತಿಗೆ ಆನ್ ಲೈನ್ ಶಿಕ್ಷಣ ಇದೆ:  ಸಚಿವ ಸುರೇಶ್ ಕುಮಾರ್

ಪ್ರಮುಖ ಸುದ್ದಿ

ಸಚಿವ ಮಾಧುಸ್ವಾಮಿ ಎಡವಟ್ಟು; 6,7ತರಗತಿಗೆ ಆನ್ ಲೈನ್ ಶಿಕ್ಷಣ ಇದೆ:  ಸಚಿವ ಸುರೇಶ್ ಕುಮಾರ್

 ಡಿವಿಜಿ ಸುದ್ದಿ, ಬೆಂಗಳೂರು: 7 ನೇ ತರಗತಿ ವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ  ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.  ಆದರೆ, ಈಗ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ ನೀಡಿದ್ದು,  6 ಮತ್ತು 7ನೇ ತರಗತಿಗೆ ಆನ್‌ಲೈನ್‌ ಶಿಕ್ಷಣ ರದ್ದು ಸಬಂಧ ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ ಎಂದಿದ್ದಾರೆ.

ಈ ಕುರಿತು  ಟ್ವೀಟ್‌ ಮಾಡಿರುವ ಸುರೇಶ್‌ ಕುಮಾರ್‌, ಕರ್ನಾಟಕ ಸರ್ಕಾರ ಎಲ್‌ಕೆಜಿ, ಯುಕೆಜಿ, 1 ರಿಂದ 5ನೇ ತರಗತಿಯವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ಧು ಮಾಡಿದೆ. 6 ಮತ್ತು 7ನೇ ತರಗತಿಯವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ದು ಮಾಡಬೇಕು ಎಂದು ಕೆಲ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಸರ್ಕಾರ ರದ್ದು ಪಡಿಸುವ ಯಾವುದೇ ನಿರ್ಧಾರ ಪ್ರಕಟಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಲ್ ಕೆಜಿ ಯಿಂದ  7ನೇ ತರಗತಿಯವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ದುಗೊಳಿಸಿ ಕ್ಯಾಬಿನೆಟ್‌ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top