ಡಿವಿಜಿ ಸುದ್ದಿ, ಮಂಗಳೂರು: ಪಾದರಾಯನಪುರದಲ್ಲಿ ಬಿಬಿಎಂಪಿ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರನ್ನು ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‍ಗೆ ಜಾತಿ, ಮತ, ಪಂಥವಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆದರೆ ಪಾದರಾಯನಪುರದಲ್ಲಿ ಕಾನೂನ ಉಲ್ಲಂಘನೆಯಾಗಿದೆ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಈ ಕುರಿತು ಗೃಹಸಚಿವರ ಜೊತೆಗೆ ಮಾತನಾಡಿದ್ದೇನೆ. ಕೃತ್ಯ ಎಸಗಿದವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಬೇಕು ಎಂದಿದ್ದಾರೆ.
ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ. ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದೊಂದು ರಾಷ್ಟ್ರ ವಿರೋಧಿ ಕೃತ್ಯ ಎಂದು ಕಿಡಿಕಾರಿದ್ದಾರೆ.