Connect with us

Dvgsuddi Kannada | online news portal | Kannada news online

ಪಾದರಾಯನಪುರ ಘಟನೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಪಾದರಾಯನಪುರ ಘಟನೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಸಿದ್ದರಾಮಯ್ಯ

 ಡಿವಿಜಿ ಸುದ್ದಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕಿತರು ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು.

ಈ ಸಮಯದಲ್ಲಿ  ಪುಂಟರು ಗುಂಪು ಗುಂಪಾಗಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದೆ.  ಇದಲ್ಲದೆ  ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಚೆಕ್‍ಪೋಸ್ಟ್ ಧ್ವಂಸಗೊಳಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸದ್ಯ 54 ಮಂದಿಯನ್ನು ಬಂಧಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top