ಪೇಶಾವರ: ದೇಶದ್ರೋಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರಿಗೆ ಪೇಶಾವರ ಹೈಕೋರ್ಟ್ ಗಲ್ಲು ಶಿಕ್ಷೆಯನ್ನು ವಿಧಿಸಿದೆ.
ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಗಲ್ಲು ಶಿಕ್ಷೆಗೆ ಒಳಗಾದ ಅಧ್ಯಕ್ಷ ಎಂಬ ಕುಖ್ಯಾತಿಗೆ ಮುಷರಫ್ ಪಡೆದಿದ್ದಾರೆ. ಪೇಷಾವರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಕಾರ್ ಅಹಮದ್ ಸೇಥ್, ನಜರ್ ಅಕ್ಬರ್, ಶಾಹೀದ್ ಕರೀಮ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಪರ್ವೇಜ್ ಮುಷರಫ್‌ಗೆ ಗಲ್ಲು ಶಿಕ್ಷೆ ವಿಧಿಸಿದೆ.
ಸದ್ಯ ದುಬೈನಲ್ಲಿ ನೆಲೆಸಿರುವ ಮುಷರಫ್ 1999 ರಿಂದ 2008ರವರೆಗೆ ಪಾಕಿಸ್ತಾನದ ಅಧ್ಯಕಕ್ಷರಾಗಿದ್ದರು. ಮುಷರಫ್, 2007ರ ನವೆಂಬರ್ 3ರಂದು ತನ್ನ ಅಧಿಕಾರ ಬಳಸಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಅಧಿಕಾರ ಅಧಿಕಾರಕ್ಕೆ ಬಂದ ನವಾಜ್ ಷರೀಫ್ ನೇತೃತ್ವದ ಸರ್ಕಾರ, ಮುಷರಫ್ ವಿರುದ್ಧ ದೇಶದ್ರೋಹದ ಆರೋಪದ ಮೇಲೆ 2013ರಲ್ಲಿ ಮುಷರಫ್ ವಿರುದ್ಧ ಪ್ರಕರಣ ದಾಖಲಿಸಿತ್ತು. 2014 ರಲ್ಲಿ ಅವರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು.