ಡಿವಿಜಿ ಸುದ್ದಿ, ದಾವಣಗೆರೆ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ದಾವಣಗೆರೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ. 5 ರಂದು ನಗರದ ಅಭಿನವ ರೇಣುಕ ಮಂದಿರದಲ್ಲಿ ನಡೆಯಲಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಘಟಕದ ಅಧ್ಯಕ್ಷ ಬಿ.ಸಿ. ಉಮಾಪತಿ, ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಶ್ರೀ ವಚನನಾಂದ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ. ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾದಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ.
ಇದೇ ಸಂದರ್ಭದಲ್ಲಿ ದಾವಣಗೆರೆ ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಯಾದಂತಹ ಅಜಯ್ ಕುಮಾರ್ ಬಿ.ಜಿ, ಕೆ.ಎಂ. ವೀರೇಶ್, ಸೋಗಿ ಶಾಂತಕುಮಾರ್ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸಮಾಜ ಮುಖಂಡರಾದ ಬಾದಾಮಿ ಕರಿಬಸಪ್ಪ,ಮಂಜುನಾಥ್, ಎನ್ .ಎಚ್. ಲಿಂಗರಾಜ್, ಚನ್ನಬಸಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.