Connect with us

Dvg Suddi-Kannada News

ನಾಳೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶ ಉದ್ದೇಶಿಸಿ ಭಾಷಣ

ಪ್ರಮುಖ ಸುದ್ದಿ

ನಾಳೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶ ಉದ್ದೇಶಿಸಿ ಭಾಷಣ

ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ನಾಳೆ (ಏಪ್ರಿಲ್ 14 )  ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯ ಅವರ ಮತ್ತೊಮ್ಮೆ ದೇಶ ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ  ಕೊರೊನಾ ವೈರಸ್ ಭೀತಿಯಿಂದ  ಮೂರನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಾಳೆಯ  ಭಾಷಣದಲ್ಲಿ ದೇಶವ್ಯಾಪಿ ಲಾಕ್ ಡೌನ್ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಬೀಳಲಿದ.  ಈ ಹಿಂದೆ ಮಾರ್ಚ್ 19 ರಂದು ದೇಶವನ್ನು ಉದ್ದೇಶಿಸಿ ಮಾ.21 ರಂದು ಜನತಾ ಕರ್ಫ್ಯೂ ಮಾಡಬೇಕೆಂದು ಕೇಳಿಕೊಂಡಿದ್ದರು. ಇದಾದ ಬಳಿಕ ಮಾ.24 ರಂದು 21 ದಿನಗಳ ಲಾಕ್‍ಡೌನ್ ಘೋಷಣೆ ಮಾಡಿದ್ದರು.

ಬಳಿಕ ಏ.5 ರಂದು ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚುವಂತೆ ಕರೆ ನೀಡಿದ್ದರು. ಇದಕ್ಕೆ  ದೇಶದ ಜನ  ಭಾರೀ ಬೆಂಬಲ ನೀಡಿದ್ದರು.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top