ಡಿವಿಜಿ ಸುದ್ದಿ, ಹರಿಹರ : ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ವಿರೂಪಗೊಳಿಸಿದ ಪ್ರಕರಣ ಹರಿಹರ ತಾಲ್ಲೂಕಿನಲ್ಲಿ ನಡೆದಿದೆ. ವಿರೂಪಗೊಳಿಸಿದ ವ್ಯಕ್ತಿಯ ವಿರುದ್ಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಧಾನಿ ಭಾವಚಿತ್ರವನ್ನು ವಿರೂಪಗೊಳಿಸಿ ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದ ಅಬ್ದುಲ್ ಕರಿಂ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹರಿಹರದ ನಿವಾಸಿಯಾದ ಅಬ್ದುಲ್ ಕರಿಂ ವಿರುದ್ಧ ಹರಿಹರ ನಗರ ಘಟದಕ ಅಧ್ಯಕ್ಷ ಅಜಿತ್ ಸಾವಂತ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಅನ್ವಯ ಇನ್ಫರ್‌ಮೇಷನ್ ಟೆಕ್ನಾಲಜಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಎಫ್ಐ ಆರ್ ಹಾಕಲಾಗಿದೆ.



