ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಗ್ರಾಮಾಂತರ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಇಸ್ಪೀಟ್ ಆಡುವಾಗ ಐಜಿ ಸ್ಕ್ವಾಡ್‌ನ ತಂಡಕ್ಕೆ ಸಿಕ್ಕಿಬಿದ್ದ 5 ಜನ ಕಾನ್ ಸ್ಟೇಬಲ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅಮಾನತು ಮಾಡಿದ್ದಾರೆ.

ಕಾನ್‌ಸ್ಟೆಬಲ್ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್, ಬಾಲರಾಜ್ ಅಮಾತನುಗೊಂಡವರಾಗಿದ್ದಾರೆ. ಇನ್ನು ಠಾಣೆಯ ಪಿಎಸ್‌ಐ ಸಂಜೀವ್ ಕುಮಾರ್ ಅವರನ್ನು ಐಜಿಪಿ ಎಸ್.ರವಿ ಅಮಾನತು ಮಾಡಿದ್ದಾರೆ.
ಸೋಮವಾರ ರಾತ್ರಿ ಇಸ್ಪೀಟ್ ಆಡುತ್ತಿದ್ದ ವೇಳೆ ಪೂರ್ವ ವಲಯ ಐಜಿಪಿ ಆದೇಶದಂತೆ ಡಿವೈಎಸ್ಪಿ ತಿರುಮಲೇಶ್, ಪೊಲೀಸ್ ಇನ್‌ಸ್ಪೆಕ್ಟರ್ ಶಂಕರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾನ್ ಸ್ಟೇಬಲ್ ಗಳನ್ನು ಬಂಧಿಸಲಾಗಿತ್ತು.



