Connect with us

Dvg Suddi-Kannada News

ರಾಜ್ಯದಲ್ಲಿ 22 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ

ಮುಖಪುಟ

ರಾಜ್ಯದಲ್ಲಿ 22 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ

ಡಿವಿಜಿ ಸುದ್ದಿ, ಹರಪನಹಳ್ಳಿ:  ರಾಜ್ಯದಲ್ಲಿ 22 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಸಹಕಾರ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಔರಾದ್ಕರ್ ತಿಳಿಸಿದರು.

ಹರಪನಹಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015ರಲ್ಲಿ ಪೊಲೀಸ್ ವಸತಿ ಗೃಹ ಯೋಜನೆಯಡಿ 8 ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ 5 ಸಾವಿರ ಮನೆಗಳು ಪೂರ್ಣಗೊಂಡು ಹಸ್ತಾಂತರ ಮಾಡಲಾಗಿದೆ. ಉಳಿದ 3 ಸಾವಿರ ಮನೆಗಳು ಪ್ರಗತಿ ಹಂತದಲ್ಲಿದ್ದು, 2020 ಅಗಸ್ಟ್  ಅಂತ್ಯದೊಳಗೆ ಪೂರ್ಣಗೊಳ್ಳಲಿವೆ ಎಂದರು.

ಸದ್ಯ ರಾಜ್ಯದಲ್ಲಿ 100ಕ್ಕೆ ಶೇ.47ರಷ್ಟು ಮನೆಗಳಿವೆ. 22 ಸಾವಿರ ನೂತನ ಮನೆಗಳು ನಿರ್ಮಾಣವಾದಲ್ಲಿ ಶೇ.67ಕ್ಕೆ ಏರಿಕೆ ಆಗಲಿದೆ. ರಾಜ್ಯದಲ್ಲಿ ಶಿಥಿಲಗೊಂಡ ಮನೆಗಳ ಮಾಹಿತಿ ತರಿಸಿಕೊಳ್ಳಲಾಗಿದೆ. ನವೀಕರಣಗೊಳಿಸಬಹುದಾ ಅಥವಾ ನೆಲಸಮಗೊಳಿಸಿ ಮರು ನಿರ್ಮಾಣ ಮಾಡಬೇಕಾ ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಪೊಲೀಸ್ ವಸತಿ ಗೃಹ ನವೀಕರಣಕ್ಕೆ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿದೆ. ಆದರೆ ಅನುದಾನ ಬಿಡುಗಡೆ ಆಗಿಲ್ಲ ಎಂದು ಮಾಹಿತಿ ನೀಡಿದರು.

ಪೊಲೀಸ್ ಸಿಬ್ಬಂದಿ ವೇತನ ತಾರತಮ್ಯ ನಿವಾರಣೆಗಾಗಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವೇತನ ಹೆಚ್ಚಳಕ್ಕೆ ನಾನು ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇನೆ. ಈ ಕುರಿತು ಪ್ರತಿಯೊಂದು ಸಭೆಯಲ್ಲಿ ಚರ್ಚಿಸುತ್ತಿದ್ದು, ಪ್ರತಿಯೊಬ್ಬರ ಸ್ಪಂದನೆ ಇದೆ. ಮುಂದಿನ ದಿನಗಳಲ್ಲಿ ನೂತನ ವೇತನ ಪರಿಷ್ಕರಣೆಗೊಂಡು ಜಾರಿಯಾಗುವ ವಿಶ್ವಾಸವಿದೆ ಎಂದರು.

Click to comment

Leave a Reply

Your email address will not be published. Required fields are marked *

More in ಮುಖಪುಟ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top