ಡಿವಿಜಿ ಸುದ್ದಿ, ಮಡಿಕೇರಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿತನ, ಮತ್ತು ಸಾಮಾಜಿಕ ನ್ಯಾಯಕ್ಕೆ ಗೌರವ ನೀಡಿಲ್ಲ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಸಮಾಧಾನ ಹೊರಹಾಕಿದ್ದಾರೆ.
ಸಂಪುಟದಲ್ಲಿ ಕೊಡಗು ಜಿಲ್ಲೆಯ ಶಾಸಕರನ್ನು ಕಡೆಗಣಿಸಲಾಗಿದೆ. ನಾನು ಐದು ಬಾರಿ ಗೆದ್ದು ಶಾಸಕನಾಗಿದ್ದರೂ ಪರಿಗಣಿಸಿಲ್ಲ. ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಹಿರಿಯ ಶಾಸಕರಿಗೆ ಗೌರವ ಇಲ್ಲದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಜನರು ಬೀದಿಗೆ ಇಳಿದು ಹೋರಾಟ ನಡೆಸಲು ಮುಂದಾಗಿದ್ದರು. ನಾನೇ ಬೇಡವೆಂದು ತಡೆದಿದ್ದೇನೆ ಎಂದರು.
ಬೇರೆ ಪಕ್ಷದಿಂದ 17 ಮಂದಿ ಬಂದಿರುವುದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ಜಿಲ್ಲಾವಾರು ಆದ್ಯತೆ ನೀಡಬೇಕಿತ್ತು.ಈ ತಪ್ಪು ಸರಿಪಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಮುಂದಿನ ನಿರ್ಧಾರದ ಕುರಿತು ಚಿಂತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.



