ಡಿವಿಜಿ ಸುದ್ದಿ, ಬೆಂಗಳೂರು: ಬೀದರ್ ನ ಶಾಹೀನ ಶಾಲೆ ವಿರುದ್ಧ ದೇಶ ದ್ರೋಹ ಕೇಸ್ ದಾಖಲಿಸಿರುವುದನ್ನು ವಿರೋಧಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಇಂದು ಬೃಹತ್ ಪ್ರತಿಭಟನೆ ನಡೆಸಿದರು.
ಫ್ರೀಡಂ ಪಾರ್ಕ್ ನಿಂದ ಸಿಎಂ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ನಾಯಕರನ್ನು ಆನಂದ್ ರಾವ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದರು. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಆಕ್ರೋಶ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬಿ.ಕೆ. ಹರಿಪ್ರಸಾದ್, ಶಾಸಕಿ ಸೌಮ್ಯ ರೆಡ್ಡಿ, ಎಂಎಲ್ ಸಿ ನಾರಾಯಣ ಸ್ವಾಮಿ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಬೀದರ್ ನ ಶಾಹೀನ ಶಾಲೆ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿರುವುದು ಖಂಡನೀಯ. ನಾಟಕ ಮಾಡುವುದು ದೇಶ ದ್ರೋಹ ಹೇಗೆ ಆಗುತ್ತದೆ. ರಾಜ್ಯದಲ್ಲಿ ಕಾನೂನು ಪಾಲನೆಯಾಗುತ್ತಿಲ್ಲ. ಇದೊಂದು ಕಾನೂನು ಬಾಹಿರ ಪ್ರಕರಣ. ರಾಜ್ಯದಲ್ಲಿ ಬಿಜೆಪಿ ನಾಯಕರು ದೇಶ ದ್ರೋಹ ಹೇಳಿಕೆ ನೀಡಿದರೂ, ರಾಜ್ಯ ಸರ್ಕಾರ ಯಾವುದೇ ದೂರು ದಾಖಲಿಸುತ್ತಿಲ್ಲ. ಕೇವಲ ಕಾಂಗ್ರೆಸ್ ಪಕ್ಷವನ್ನು ನಾಯಕರು ಮಾತ್ರ ಸರ್ಕಾರಕ್ಕೆ ಟಾರ್ಗೆಟ್ ಮಾಡುತ್ತಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ಪಕ್ಷ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇಂತಹ ಪ್ರತಿಭಟನೆ ಇನ್ನು ಆರಂಭ ಮಾತ್ರ. ಮುಂದಿನ ದಿನಗಳಲ್ಲಿ ಇನ್ನು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದರು.