ಡಿವಿಜಿ ಸುದ್ದಿ, ದಾವಣಗೆರೆ: ಕೆಪಿಸಿಸಿ ಹುದ್ದೆ ಖಾಲಿಯಾಗಿ ಆರು ತಿಂಗಳಾದರೂ ಇನ್ನೂ ಹೈಕಮಾಂಡ್ ಗೆ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಡಿ.ಕೆ. ಶಿವಕುಮಾರ್ ಅಧ್ಯಕ್ಷರಾದರೆ, ಸಿದ್ದರಾಮಯ್ಯಗೆ ಆಗಲ್ಲ. ಸಿದ್ದರಾಮಯ್ಯ ಕಡೆಯವರಾದರೆ, ಡಿ.ಕೆ. ಶಿವಕುಮಾರ್ ಗೆ ಆಗಲ್ಲ. ಒಟ್ನಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮರು ದಿನವೇ ಕಾಂಗ್ರೆಸ್ ನಲ್ಲಿ ಬಂಡಾಯ ಎದ್ದೇಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ದಾವಣಗೆರೆಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ವೀರೇಶ್ ಹನಗವಾಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಹೊಡೆದಾಡ ಶುರುವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅಧಿವೇಶನ ಶುರುವಾಗಲಿದೆ. ಸದಸನದಲ್ಲಿ ಪ್ರಶ್ನಿಸಲು ಅಧಿಕೃತ ವಿರೋಧ ಪಕ್ಷದ ನಾಯಕರೇ ಇಲ್ಲದಂತಾಗಿದೆ. ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗುತ್ತದೆ. ಬಿಜೆಪಿಯಲ್ಲಿ ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಆದರೆ ಸೋನಿಯಾಗಾಂಧಿ ರಾಜ್ಯಕ್ಕೆ ಮೇಸ್ತ್ರಿಗಳನ್ನು ಕಳುಹಿಸುತ್ತಿದ್ದಾರೆ ಎಂದರು.
ಯಡಿಯೂರಪ್ಪ ಕಣ್ಣೀರು ಒರೆಸುವ ಮುಖ್ಯಮಂತ್ರಿ. ಕುಮಾರಸ್ವಾಮಿ ಮನೆ ಮನೆಗೂ ಹೋಗಿ ಕಣ್ಣೀರು ಹಾಕುವ ಮುಖ್ಯಮಂತ್ರಿ. ವಿಪಕ್ಞಗಳು ಮತ ಬ್ಯಾಂಕ್‌ಗೆ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿದ್ದಾರೆ. ಪೌರತ್ವ ತಿದ್ದುಪಡಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
.