Connect with us

Dvg Suddi-Kannada News

ಉಪ ಚುನಾವಣಾ ಸಮರ : ಕೊನೆಯ ದಿನ ನಾಮಪತ್ರ ಸಲ್ಲಿಕೆಯ ಅಬ್ಬರ

ಮುಖಪುಟ

ಉಪ ಚುನಾವಣಾ ಸಮರ : ಕೊನೆಯ ದಿನ ನಾಮಪತ್ರ ಸಲ್ಲಿಕೆಯ ಅಬ್ಬರ

 ಡಿವಿಜಿ ಸುದ್ದಿ, ಬೆಂಗಳೂರು:  ತೀವ್ರ ಕುತೂಹಲ ಮೂಡಿಸಿದ ಉಪ ಚುನಾವಣಾ ಕಣ ಮೂರು ಪಕ್ಷಗಳಿಗೂ ಪ್ರತಿಷ್ಠೆಯಾಗಿ ಪರಿಣಮಿಸಿದ್ದು, ಮೂರು ಪಕ್ಷದ ನಾಯಕರು ಗೆಲ್ಲಲೇ ಬೇಕಾದ ಹಠಕ್ಕೆ ಬಿದ್ದಿವೆ. ಇಂದು ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರದ ಮೂಲಕ ಚುನಾವಣೆ ಅಖಾಡಕ್ಕೆ ಇಳಿದ್ರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿರುವ 15 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಬೆಂಗಳೂರಿನ 4 ಕ್ಷೇತ್ರಗಳು ಸೇರಿದಂತೆ ರಾಜ್ಯದ  ವಿವಿಧ ಭಾಗದಲ್ಲಿ ಮೂರು ಪಕ್ಷದ ಅಭ್ಯರ್ಥಿಗಳು  ನಾಮಪತ್ರಗಳ ಸಲ್ಲಿಸಿದ್ರು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ  ಬೈರತಿ ಬಸವರಾಜ್ ಅವರಿಗೆ ಕಂದಾಯ ಸಚಿವ ಆರ್ ಅಶೋಕ್  ಸಾಥ್ ನೀಡಿದ್ರು.  ಜೆಡಿಎಸ್ ತೋರೆದು  ಬಿಜೆಪಿ ಸೇರಿರುವ ಮಹಾಲಕ್ಷ್ಮಿ ಲೇಔಟ್ನ  ಕೆ.ಗೋಪಾಲಯ್ಯ ಅವರಿಗೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸಾಥ್ ನೀಡಿದರು. ಇನ್ನು ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವರು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಜೊತೆಗೆ ಇದ್ರು.

ಬಿಜೆಪಿ ಆಭ್ಯರ್ಥಿ ಎಂ ಶರವಣ ಅವರಿಗೆ ಮೇಯರ್ ಗೌತಮ್ ಕುಮಾರ್  ಸಾಥ್ ನೀಡಿದರು. ಅಥಣಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಜಾನನ ಕಣಕ್ಕೆ ಇಳಿದಿದ್ದು, ಶಾಸಕ ಎಂ.ಬಿ. ಪಾಟೀಲ, ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ ಜೊತೆಗೆ ಇದ್ರು.

ಇನ್ನು  ತೀವ್ರ ಕುತೂಹಲ ಮೂಡಿಸಿದ್ದ ಗೋಕಾಕ್ ವಿಧಾಸಭಾ ಕ್ಷೇತ್ರದಿಂದ ಜಾರಕಿಹೊಳಿ ಬ್ರದರ್ಸ್ ನಡುವೆ ಜಿದ್ದಾಜಿದ್ದಿನ ಪೈಟ್ ಏರ್ಪಟ್ಟಿದೆ.ಒಂದೆಡೆ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಬ್ಬರದ ರೋಡ್ ಶೋ ನಡೆಸಿದ್ರು.  ಬಿಜೆಪಿಯ ರಮೇಶ ಜಾರಕಿಹೊಳಿ ಯಾವುದೇ ಅಬ್ಬರದ ರೋಡ್ ಶೋ ಇಲ್ಲದೆ ನಾಮಪತ್ರ ಸಲ್ಲಿಸಿದ್ರು.

ವಿಜಯನಗರ ದಿಂದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಉಮೇದುವಾರಿಕೆ ಸಲ್ಲಿಸಿದ್ರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ರಾಜುಗೌಡ, ಹಾಲಪ್ಪ ಆಚಾರ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಸಾಥ್ ನೀಡಿದ್ರು. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮುಖಂಡ ಕವಿರಾಜ ಅರಸ್ ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ಸಲ್ಲಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಅವರು ಕವಿರಾಜ ಅರಸ್ ಅವರನ್ನು ಮನವೊಲಿಸಲು ಮಾಡಿದ ಪ್ರಯತ್ನಗಳೆಲ್ಲ ವಿಫಲವಾಗಿವೆ. ಕಾಂಗ್ರೆಸ್ ನಿಂದ ವೆಂಕಟರಾವ ಘೋರ್ಪಡೆ ಹಾಗೂ ಜೆ.ಡಿ.ಎಸ್.ನಿಂದ ಎನ್.ಎಂ.ನಬಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಸಲಿಸಿದ್ರು.  ಸಚಿವ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಅನಂತಕುಮಾರ್ ಹೆಗಡೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ, ಕುಮಾರ್ ಬಂಗಾರಪ್ಪ ಭಾಗಿಯಾಗಿದ್ರು.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ನೆಲೆ ಇಲ್ಲ ಎಂದು ಸವಾಲು ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಟಕ್ಕರ್ ನೀಡಲು ತಮ್ಮ ಬಲ ಪ್ರದರ್ಶನ್ ನೀಡುವ  ಉದ್ದೇಶದಿಂದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಭಾರೀ  ದೊಡ್ಡ  ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ  ಆಂಜನಪ್ಪ ಅವರಿಗೆ ಶಾಸಕರಾದ ಕೃಷ್ಣ ಬೈರೇಗೌಡ, ಎನ್.ಎಚ್.ಶಿವಶಂಕರರೆಡ್ಡಿ, ವಿ.ಮುನಿಯಪ್ಪ, ಮುಖಂಡರಾದ ಜಿ.ಎಚ್.ನಾಗರಾಜ್, ಯಲುವಹಳ್ಳಿ ರಮೇಶ್, ಕೆ.ವಿ‌.ನವೀನ್ ಕಿರಣ್ ಅವರು ಸಾಥ್ ನೀಡಿದರು.

ಅಥಣಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ ಕುಮಠಳ್ಳಿ ಸೋಮವಾರ ನಾಮಪತ್ರ ಸಲ್ಲಿಸಿದರು.ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ಸಿ.ಸಿ. ಪಾಟೀಲ, ಮುಖಂಡರಾದ ಮಹೇಶ ಟೆಂಗಿನಕಾಯಿ, ಉಮೇಶ ಬಂಟೊಡಕರ ಜೊತೆ ಸೇರಿ ನಾಮಪತ್ರ ಸಲ್ಲಿಸಿದ್ರು.

 

 

Click to comment

Leave a Reply

Your email address will not be published. Required fields are marked *

More in ಮುಖಪುಟ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top