ಡಿವಿಜಿ ಸುದ್ದಿ, ಹುಬ್ಬಳ್ಳಿ: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಮತ್ತು ಎನ್ಆರ್ಸಿ ವಿರೋಧಿಸಿ ಕಪ್ಪು ಬಲೂನ್ ಹಾರಾಟ ಮಾಡಿ ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿದ್ರು.
ಇಂದು ಪೌರತ್ವ ಕಾಯ್ದೆ ಕುರಿತು ಜನಜಾಗೃತಿ ಸಮಾವೇಶದ ಹಿನ್ನೆಲೆಯಲ್ಲಿ ಅಮಿತ್ ಶಾ ಮಾತನಾಡಲಿದ್ದಾರೆ. ನಗರದ ನೆಹರು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಅಮಿತ್ ಶಾ ಅವರು ಬರುವುದಕ್ಕೂ ಮುನ್ನವೇ ಸಿಎಎ, ಎನ್ಆರ್ಸಿ ವಿರೋಧಿಸಿ ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿದ್ದಾರೆ.
ನೋ ಸಿಎಎ, ನೋ ಎನ್.ಆರ್.ಸಿ, ಅಮಿತ್ ಶಾ ಗೋ ಬ್ಯಾಕ್ ಎಂದು ಬರೆದ ಫಲಕದೊಂದಿಗೆ ಗ್ಯಾಸ್ ತುಂಬಿದ ಕಪ್ಪು ಬಲೂನ್‍ಗಳನ್ನು ಮೇಲಕ್ಕೆ ಹಾರಿ ಬಿಟ್ಟಿದ್ದಾರೆ. ಇದರ ಜೊತೆಗೆ ಕಪ್ಪು ಬಣ್ಣದ ಬಟ್ಟೆ ತೊಟ್ಟು ಕ ಗೋಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದು, ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



