ಡಿವಿಜಿ ಸುದ್ದಿ, ಚಿತ್ರದುರ್ಗ: ಬೌದ್ಧಿಕ, ವೈಚಾರಿಕ, ಸಂಘಟನಾತ್ಮಕವಾಗಿ ಕಾಂಗ್ರೆಸ್ ದಿವಾಳಿಯಾಗಿದ್ದು, ಪೌರತ್ವ ಕಾಯ್ದೆ ವಿಚಾರದಲ್ಲಿ ಬ್ರಿಟಿಷರು ಅನುಸರಿಸುತ್ತಿದ್ದ ಒಡೆದಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಂ ಸಮುದಾಯದವರಿಗೆ ಯಾವುದೇ ತೊಂದರೆ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಮುರುಘಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪೌರತ್ವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ನೆಪದಲ್ಲಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗೆ ಪರಮಾಧಿಕಾರ
ಸಚಿವ ಸಂಪುಟ ವಿಸ್ತಾರಣೆಯಲ್ಲಿ ಮುಖ್ಯಮಂತ್ರಿಗೆ ಪರಮಾಧಿಕಾರ ನೀಡಲಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಯಾವ ಖಾತೆ ಕೊಡಬೇಕು ಎಂಬುದನ್ನು ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಬಳಿಕ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಎಲ್ಲ ಜಿಲ್ಲೆಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.