ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಯ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮವನ್ನು ಸರಣಿ ಟ್ವೀಟ್ ಮೂಲಕ ವಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಕನ್ನಡಿಗರನ್ನು ಅವಮಾನಿಸಿದ್ದೀರಿ
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರುವ ಮೂಲಕ ಕನ್ನಡಿಗರನ್ನು ಅವಮಾನಿಸಿದ್ದೀರಿ. ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು. ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ ನೀವು ಕನ್ನಡಿಗರನ್ನು ಅವಮಾನಿಸಿದ್ದೀರಿ ಎಂದು ಕಿಡಿಕಾರಿದ್ದಾರೆ.
ನಮ್ಮಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು. ಒಡೆಯುವವರು,
ಬೆಂಕಿಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ.
@BSYBJP ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ
ನಿಷೇಧಾಜ್ಞೆ ಹೇರಿ ನೀವು ಕನ್ನಡಿಗರನ್ನು ಅವಮಾನಿಸಿದ್ದೀರಿ.
1/5#RevokeSec144#CAAProtest— Siddaramaiah (@siddaramaiah) December 19, 2019
ಪ್ರತಿಭಟನೆ,
ಪ್ರತಿರೋಧ,
ಚಳುವಳಿಗಳೆಲ್ಲ ಆರೋಗ್ಯಪೂರ್ಣ ಪ್ರಜಾಪ್ರಭುತ್ವದ ಲಕ್ಷಣಗಳು.
ಭಿನ್ನಮತದ ಅಭಿವ್ಯಕ್ತಿಯ ಕೊರಳು ಹಿಚುಕಲು ಹೊರಡುವುದು ಸರ್ವಾಧಿಕಾರಿ ಧೋರಣೆ. ಇದು ಹಿಟ್ಲರನ ಜರ್ಮನಿ ಅಲ್ಲ,
ಗಾಂಧೀಜಿವಯರ ಭಾರತ.@BSYBJP ಅವರೇ,
ನೀವು ಪಕ್ಷದ ಗುಲಾಮರಾಗಬೇಡಿ, ಆತ್ಮಸಾಕ್ಷಿಗೆ ಕಿವಿಕೊಡಿ.
3/5#RevokeSwc144— Siddaramaiah (@siddaramaiah) December 19, 2019
ಕರ್ನಾಟಕ ಪೊಲೀಸರಿಗೆ ದೆಹಲಿ ಪೊಲೀಸರು ಆದರ್ಶವಾಗುವುದು ಬೇಡ. ಕಾರ್ಯಾಂಗದ ಮುಖ್ಯ ಭಾಗವಾಗಿರುವ ಪೊಲೀಸರೇ, ನೀವು ಸರ್ಕಾರಿ ನೌಕರರಾಗಿದ್ದರೂ ಮೊದಲು ಮನುಷ್ಯರು. ಕರ್ನಾಟಕದ ಪೊಲೀಸರಿಗೆ ಅವರದ್ದೇ ಆಗಿರುವ ಹಿರಿಮೆ-ಗರಿಮೆಗಳಿವೆ. ನಿಮಗೆ ದೆಹಲಿಪೊಲೀಸರು ಆದರ್ಶವಾಗುವುದು ಬೇಡ, ಅವರ ಸ್ಪೂರ್ತಿಯಿಂದ ಕೆಲಸ ಮಾಡಿದರೆ ಕರ್ನಾಟಕದ ಜನತೆ ನಿಮ್ಮನ್ನು ಕ್ಷಮಿಸಲಾರರು ಎಂದು ಟ್ವೀಟ್ ಮಾಡಿದ್ದಾರೆ.
ನಿಮ್ಮ ಪೌರತ್ವ ತಿದ್ದುಪಡಿ ಕಾಯ್ದೆಯ ಜನಹಿತದ ಬಗ್ಗೆ ಅಷ್ಟೊಂದು ಭರವಸೆ ಇದ್ದಿದ್ದರೆ ಪ್ರತಿಭಟನೆಗೆ ಯಾಕೆ ಹೆದರುತ್ತಿದ್ದೀರಿ, @narendramodi ಅವರೇ?
ಜನಾಭಿಪ್ರಾಯ ಆಲಿಸಿ, ಅವರಿಗೆ ಮನವರಿಕೆ ಮಾಡಿಕೊಡಿ. ದಂಡಪ್ರಯೋಗ ಮನುಷ್ಯನ ದೌರ್ಬಲ್ಯ.
ನಿಮ್ಮ ವರ್ತನೆಯೇ ನಿಮ್ಮ ದುಷ್ಟ ಆಲೋಚನೆಗೆ ಸಾಕ್ಷಿ.
4/5#CAAProtest— Siddaramaiah (@siddaramaiah) December 19, 2019
ಕಾರ್ಯಾಂಗದ ಮುಖ್ಯ ಭಾಗವಾಗಿರುವ ಪೊಲೀಸರೇ,
ನೀವು ಸರ್ಕಾರಿ ನೌಕರರಾಗಿದ್ದರೂ ಮೊದಲು ಮನುಷ್ಯರು.ಕರ್ನಾಟಕದ ಪೊಲೀಸರಿಗೆ ಅವರದ್ದೇ ಆಗಿರುವ ಹಿರಿಮೆ-ಗರಿಮೆಗಳಿವೆ.
ನಿಮಗೆ ದೆಹಲಿಪೊಲೀಸರು ಆದರ್ಶವಾಗುವುದು ಬೇಡ, ಅವರ ಸ್ಪೂರ್ತಿಯಿಂದ ಕೆಲಸ ಮಾಡಿದರೆ
ಕರ್ನಾಟಕದ ಜನತೆ ನಿಮ್ಮನ್ನು ಕ್ಷಮಿಸಲಾರರು.
5/5
@RevokeSec144— Siddaramaiah (@siddaramaiah) December 19, 2019