Connect with us

Dvg Suddi-Kannada News

ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೆ ಸಿದ್ದರಾಮಯ್ಯ ಖಂಡನೆ

ರಾಜಕೀಯ

ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೆ ಸಿದ್ದರಾಮಯ್ಯ ಖಂಡನೆ

ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಯ ಮುನ್ನೆಚ್ಚರಿಕಾ ಕ್ರಮವಾಗಿ  ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮವನ್ನು  ಸರಣಿ ಟ್ವೀಟ್ ಮೂಲಕ ವಿಪಕ್ಷದ ನಾಯಕ  ಸಿದ್ದರಾಮಯ್ಯ ಖಂಡಿಸಿದ್ದಾರೆ.

ಕನ್ನಡಿಗರನ್ನು ಅವಮಾನಿಸಿದ್ದೀರಿ
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರುವ ಮೂಲಕ ಕನ್ನಡಿಗರನ್ನು ಅವಮಾನಿಸಿದ್ದೀರಿ. ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು. ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ ನೀವು ಕನ್ನಡಿಗರನ್ನು ಅವಮಾನಿಸಿದ್ದೀರಿ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ಪೊಲೀಸರಿಗೆ ದೆಹಲಿ ಪೊಲೀಸರು ಆದರ್ಶವಾಗುವುದು ಬೇಡ. ಕಾರ್ಯಾಂಗದ ಮುಖ್ಯ ಭಾಗವಾಗಿರುವ ಪೊಲೀಸರೇ, ನೀವು ಸರ್ಕಾರಿ ನೌಕರರಾಗಿದ್ದರೂ ಮೊದಲು ಮನುಷ್ಯರು. ಕರ್ನಾಟಕದ ಪೊಲೀಸರಿಗೆ ಅವರದ್ದೇ ಆಗಿರುವ ಹಿರಿಮೆ-ಗರಿಮೆಗಳಿವೆ. ನಿಮಗೆ ದೆಹಲಿಪೊಲೀಸರು ಆದರ್ಶವಾಗುವುದು ಬೇಡ, ಅವರ ಸ್ಪೂರ್ತಿಯಿಂದ ಕೆಲಸ ಮಾಡಿದರೆ ಕರ್ನಾಟಕದ ಜನತೆ ನಿಮ್ಮನ್ನು ಕ್ಷಮಿಸಲಾರರು ಎಂದು ಟ್ವೀಟ್ ಮಾಡಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top