Connect with us

Dvgsuddi Kannada | online news portal | Kannada news online

ನೆರೆಯ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಿ ಎಂದಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಡಿಯೋ ವೈರಲ್ ಮಾಡಿದ ಬಿಜೆಪಿ

ರಾಷ್ಟ್ರ ಸುದ್ದಿ

ನೆರೆಯ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಿ ಎಂದಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಡಿಯೋ ವೈರಲ್ ಮಾಡಿದ ಬಿಜೆಪಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳು ಭಾರೀ  ಪ್ರತಿ ಭಟನೆ ನಡೆಸುತ್ತಿರುವ ಬೆನ್ನಲ್ಲಿಯೇ ಬಿಜೆಪಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್  2003 ರಲ್ಲಿ ಪೌರತ್ವ ಹಿದ್ದುಪಡಿ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ ವಿಡಿಯೋ ವೈರಲ್ ಮಾಡಿದೆ.

ಆ ವಿಡಿಯೋದಲ್ಲಿ ಮನ ಮೋಹನ್ ಸಿಂಗ್ ಅವರು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವಂತೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದ ವಿಡಿಯೋ ವಿಡಿಯೋ ತುಣಕನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದೆ.

2003ರ ಡಿಸೆಂಬರ್ 15 ರಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಮನಮೋಹನ್ ಸಿಂಗ್ ಮಾತನಾಡಿ, ನೆರೆಯ ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಲ್ಲಿ ಕಿರುಕುಳವನ್ನು ಎದುರಿಸುತ್ತಿರುವ ಅಲ್ಪಸಂಖ್ಯಾತರಿಗೆ ಪೌರತ್ವ  ನೀಡುವಲ್ಲಿ ಉದಾರವಾದಿ ಮಾರ್ಗವನ್ನು ಅನುಸರಿಸಬೇಕು ಎಂದಿದ್ದರು. ಆಗ ನೀವು ಹೇಳಿದ್ದಂತೆ ನಾವು  ಈಗ ಪೌರತ್ವ ಕಾಯ್ದೆ ಜಾರಿಗೆ ತಂದು   ಅವರಿಗೆ ನೆರವಾಗುತ್ತಿದ್ದೇವೆ ಎಂದು ಬರೆದುಕೊಂಡಿದೆ.

ಪ್ರತಿಭಟನೆ ಹತ್ತಿಕ್ಕಲು  ಬಿಜೆಪಿ ಈ ವಿಡಿಯೋವನ್ನು ಬಳಸಿದೆ.  ಪೌರತ್ವ ಕಾಯ್ದೆಯ ಸಾಂವಿಧಾನಿಕಾ ಮಾನ್ಯತೆ  ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

ಪೌರತ್ವ ಕಾಯ್ದೆ ಯಾರು ಧೈರ್ಯ ತೋರಲಿಲ್ಲ. ಆದರೆ ಈಗ ಮೋದಿ ಸರ್ಕಾರ ಧೈರ್ಯ ಮಾಡಿ ಪೌರತ್ವ ಕಾಯ್ದೆ ಜಾರಿಗೆ ತರುತ್ತಿದೆ. ಕಾಂಗ್ರೆಸ್ ಏನೇ ಮಾಡಿದರೂ ಅದು ಜಾತ್ಯಾತೀತ, ಅದೇ ನಾವು ಜಾರಿಗೆ ತಂದರೆ ಕೋಮುವಾದಿಗಳಾಗುತ್ತೇವೆ ಎಂದು ಬಿಜೆಪಿ ಹೇಳಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top