Connect with us

Dvgsuddi Kannada | online news portal | Kannada news online

ಚೀನಾ ಬೇಹುಗಾರಿಕೆ ಬಗ್ಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ  

ರಾಜಕೀಯ

ಚೀನಾ ಬೇಹುಗಾರಿಕೆ ಬಗ್ಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ  

ಡಿವಿಜಿ ಸುದ್ದಿ, ಬಾಗಲಕೋಟೆ: ಚೀನಾ ನಡೆಸುತ್ತಿದೆ ಎನ್ನಲಾದ ಬೇಹುಗಾರಿಕೆ ಬಗ್ಗೆ ಕೇಂದ್ರ ಸರ್ಕಾರ  ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಚೀನಾ  ನಮ್ಮ ದೇಶದ ಪ್ರಖರ ಮೇಲೆ ಬೇಹುಗಾರಿಕೆ ಮಾಡುವುದು ಖಂಡನೀಯ. ಇಂತಹ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು. ಅವರನ್ನು ಪತ್ತೆ ಹಚ್ಚಿಬೇಕು. ಇದು ಕೇಂದ್ರ ಸರ್ಕಾರ ಮಾಡಬೇಕಾದ ಕೆಲಸ. ಇಂತಹ ಕೃತ್ಯ ನಡೆಯುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

siddaramai bgk

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ನಾನು ಶಾಸಕ. ಏನ್ರಿ ಚಿಮ್ಮನಕಟ್ಟಿ ಎಂದು ಬಾದಾಮಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ನೋಡಿ ನಗೆ ಚಟಾಕಿ ಹಾರಿಸಿದರು. ಅಲ್ಲದೆ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದರು.

ಬದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ದಿನದ ಪ್ರವಾಸ ಮುಂದುವರಿಸಿದ್ದು, ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಧಿಕಾರಿಗಳ ಜೊತೆಗೆ ಕಾಮಗಾರಿ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಶಾಸಕರ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಾಜಿ ಸಚಿವರಾದ ಬಿ.ಬಿ.ಚಿಮ್ಮನಕಟ್ಟಿ, ಎಚ್.ವೈ.ಮೇಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ ಮತ್ತಿತರರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top