ಡಿವಿಜಿ ಸುದ್ದಿ, ಚಿತ್ರದುರ್ಗ: ಉಪ ಚುನಾವಣೆಯ ಸೋಲಿನ ಭೀತಿಯಲ್ಲಿ ವಿಪಕ್ಷಳಿದ್ದು, ಆಧಾರ ರಹಿತ ಆರೋಪ ಮಾಡುತ್ತಿವೆ. ಶಿರಾದಲ್ಲಿ ಬಿಜೆಪಿ ಅಲೆ ವಿರೋಧ ಪಕ್ಷಗಳಿಗೆ ನಡುಕ ಹುಟ್ಟಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಾದ ಪಡೆದರು. ಶಿರಾ ಕ್ಷೇತ್ರದ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಕಮಲ ಅರಳಿಸುವ ವಿಶ್ವಾಸ ಪಕ್ಷದ ಕಾರ್ಯಕರ್ತರಲ್ಲಿದೆ. ಅಭಿವೃದ್ಧಿ ಕೆಲಸ ಆಗಬೇಕು ಎಂಬ ಅಪೇಕ್ಷೆಯನ್ನು ಇಲ್ಲಿನ ಜನ ಹೊಂದಿದ್ದಾರೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಮೂರು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡುವುದಿಲ್ಲ ಎಂದರು.



