ಡಿವಿಜಿ ಸುದ್ದಿ, ದಾವಣಗೆರೆ: ಸಿದ್ದರಾಮಯ್ಯ ಸರ್ಕಾರ ಐದು ವರ್ಷ ಏನು ಕಿತ್ತು ಹಾಕಿದೆ ಎನ್ನುವುದನ್ನು ಹಿಂತಿರುಗಿ ನೋಡಿದ್ರೆ ಗೊತ್ತಾಗುತ್ತದೆ. ಸಿದ್ದರಾಮಯ್ಯ ನನಗೆ ಬುದ್ದಿ ಹೇಳುವ ನೈತಿಕತೆ ಇಲ್ಲ ಹೊಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಹರಿಹರದಲ್ಲಿ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾಗುವುದಕ್ಕಿಂತ ಮೊದಲು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು ದರಿದ್ರ ಸರ್ಕಾರ ಎಂದ ಸಿದ್ದರಾಮಯ್ಯ ಮಾತಿಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯ ಐದು ವರ್ಷದಲ್ಲಿ ಏನು ಕಿತ್ತು ಹಾಕಿದ್ದಾರೆ ಎಂಬುದು ಗೊತ್ತಿದೆ. ಇಂತಹ ಮಾತುಗಳಿಂದ ಜನರಿಂದ ಚಪ್ಪಾಳಿ ಗಿಟ್ಟಿಸಿಕೊಳ್ಳಬಹುದೇ ಹೊರತು ಏನು ಮಾಡಲು ಸಾಧ್ಯವಿಲ್ಲ. ಮನ ಬಂದಂತೆ ಮಾತನಾಡುವ ಸಿದ್ದರಾಮಯ್ಯ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.



