ಡಿವಿಜಿ ಸುದ್ದಿ, ಬೆಂಗಳೂರು: ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ.. ಹಿಂದೂಗಳನ್ನು ಕೆಣಕಬೇಡಿ ಎಂದಿದ್ದ ಸೋಮಶೇಖರ್ ರೆಡ್ಡಿ ವಿರುದ್ಧ ಕ್ರಮಿನಿಲ್ ಕೇಸ್ ದಾಖಲಿಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿತು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಮನವಿ ಸಲ್ಲಿಸಿತು. ಪೊಲೀಸ್ ಮಹಾ ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ಮನವಿ ಸ್ವೀಕರಿಸಿದರು..
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬಳ್ಳಾರಿಯಲ್ಲಿ ನಡೆದಿದ್ದ ಮೆರವಣಿಗೆಯಲ್ಲಿ ಮಾತನಾಡಿದ್ದ ಸೋಮಶೇಖರ್ ರೆಡ್ಡಿ, ‘ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ’ ಎಂದು ಹೇಳಿದ್ದರು.



