ಡಿವಿಜಿ ಸುದ್ದಿ, ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ಬಾಂಬ್ ಎಸೆಯಲು ಬಂದಿದ್ದವರನ್ನು ಎತ್ತಿ ಮುದ್ದಾಡಬೇಕಿತ್ತಾ.? ಎಂದು ನಿನ್ನೆಯ ಪ್ರತಿಭಟನೆಯನ್ನು ಸಚಿವ ಸಿ.ಟಿ. ರವಿ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷದವರು ಪ್ರಚೋದನೆ ನೀಡುತ್ತಿದ್ದಾರೆ. ಜನರನ್ನು ಬೀದಿಗೆ ತಳ್ಳಿ ಮಜಾ ನೋಡುತ್ತಿದ್ದಾರೆ. ಬೀದಿಯಲ್ಲಿ ಕಲ್ಲು ತೂರಾಟ ನಡೆಸುವವರು ಅಮಾಯಕರಲ್ಲ ಎಂದರು.
ಪ್ರಚೋದನಾ ಹೇಳಿಕೆ ನೀಡಿದ ಶಾಸಕ ಯು.ಟಿ. ಖಾದರ್ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಪೊಲೀಸರು ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಒತ್ತಾಯಿಸಿದರು.



