ಡಿವಿಜಿ ಸುದ್ದಿ, ದಾವಣಗೆರೆ : ಮಂಗಳೂರು ಗೋಲಿಬಾರ್ ವಿಚಾರದಲ್ಲಿ ಬಿಜೆಪಿ ಅವರು ಒಂದೇ ಸುಳ್ಳನ್ನು ಹತ್ತು ಸಲ ಹೇಳುತ್ತಿದ್ದು,ವಿಡಿಯೋಗಳನ್ನು ಅವರಿಗೆ ಬೇಕಾದ ರೀತಿಯಲ್ಲಿ ಎಡಿಟ್ ಮಾಡಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಒಂದು ಸುಳ್ಳನ್ನು ಹತ್ತು ಬಾರಿ ಹೇಳುತ್ತಾರೆ. ಇದೀಗ ಬಿಡುಗಡೆ ಮಾಡಿರುವ ವಿಡಿಯೋಗಳು ಅವರ ಅನುಕೂಲಕ್ಕೆ ತಕ್ಕಂತೆ ಇವೆ. ವಿಡಿಯೋಗಳನ್ನು ಬೇಕಾದ ರೀತಿಯಲ್ಲಿ ಎಡಿಟ್ ಮಾಡಬಹುದು. ಪೌರತ್ವ ಕಾಯ್ದೆಗೆ ನನ್ನ ವಿರೋಧವಿದೆ ಎಂದ್ರು.