ಡಿವಿಜಿ ಸುದ್ದಿ, ದಾವಣಗೆರೆ: ಉಪ ಚುನಾವಣೆ ನಂತರ ಯಡಿಯೂರಪ್ಪ ಮನೆಗೆ ಹೋಗ್ತಾರೆ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಚುನಾವಣೆ ಫಲಿತಾಂಶ ಬಂದ ನಂತರ ಯಾರು ಮನೆಗೆ ಹೋಗ್ತಾರೆ ಅಂತಾ ಕಾದು ನೋಡಿ ಎಂದ್ರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಹದಿನೈದಕ್ಕೆ ಹದಿನೈದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಫಲಿತಾಂಶ ಬರುವ ಡಿಸೆಂಬರ್ 9ಕ್ಕೆ ಯಾರು ಮನೆಗೆ ಹೋಗ್ತಾರೆ ಎಂದು ಗೊತ್ತಾಗಲಿದೆ ಎಂದರು.
ಬೆಳಗಾವಿಯ ಪ್ರಚಾರ ಸಂದರ್ಭದಲ್ಲಿ ವೀರಶೈವ ಸಮುದಾಯದ ಒಂದು ವೋಟ್ ಕೂಡ ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಿಎಸ್ ವೈ ಕರೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣೆ ಆಯೋಗಕ್ಕೆ ದೂರು ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪ್ರತಿಪಕ್ಷಗಳಿಗೆ ಬೇರೆ ಕೆಲಸ ಇಲ್ಲ ಅದನ್ನಾದರೂ ಮಾಡಲಿ. ಮೂರುವರೆ ವರ್ಷ ಅವಧಿಪೂರ್ಣ ಮಾಡುತ್ತೇನೆ. ಎಲ್ಲಾ ಸಮುದಾಯದವರು ಬಿಜೆಪಿಗೆ ಬೆಂಬಲಿಸಬೇಕು. ಉಪ ಚುನಾವಣೆ ನಂತರ ಯಾವುದೇ ಪಕ್ಷದ ಬೆಂಬಲ ಇಲ್ಲದೆ ಆಡಳಿತ ನಡೆಸುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನ ಹುಳಿಮಾವು ಕೆರೆ ಹೊಡೆದ ಹಿನ್ನೆಲೆ ಎಲ್ಲಾ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಹಾರ ಕಾರ್ಯ ನಡೆಸುತ್ತಿದ್ದಾರೆ ಎಂದ್ರು.