Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ; ಟಿಕೆಟ್ ಗಾಗಿ ಕೊನೆ ಕ್ಷಣದ ಕಸರತ್ತು

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ; ಟಿಕೆಟ್ ಗಾಗಿ ಕೊನೆ ಕ್ಷಣದ ಕಸರತ್ತು

ಡಿವಿಜಿ ಸುದ್ದಿ, ದಾವಣಗೆರೆ:  ಮಹಾನಗರ ಪಾಲಿಕೆ ಚುನಾವಣಾ ಕಣ ರಂಗೇರಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಕೊನೆ ಕ್ಷಣದ ಕಸರತ್ತು ಮುಂದುವರಿದಿದೆ.  ಪಕ್ಷದ ವತಿಯಿಂದ ಟಿಕೆಟ್ ಸಿಗದಿದ್ದ ಪಕ್ಷದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಅಳೆದು ತೂಗಿ ಟಿಕೆಟ್ ನೀಡಲಾಗುತ್ತಿದೆ. ಕೆಲವರು ತಮ್ಮ ತಮ್ಮ ನಾಯಕರ ಮೂಲಕ ಒತ್ತಡ ಹಾಕುವ ತಂತ್ರ ಅನುಸರಿಸುತ್ತಿದ್ದಾರೆ.

ಮೂರು ಪಕ್ಷಗಳು ಅಧಿಕೃತ ಪಟ್ಟಿ ಬಿಡುಗಡೆ ಮಾಡಿಲ್ಲ.30 ರಂದು ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ನಾಳೆ ಅಧಿಕೃತ ಪಟ್ಟಿ ಹೊರ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಅಭ್ಯರ್ಥಿಗಳು ಒಳ ಒಳಗೆ ತಮ್ಮ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದು, ಇನ್ನೊಂದೆಡೆ ಟಿಕೆಟ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ.

davangere palike

ದಾವಣಗೆರೆ ಮಹಾನಗರಪಾಲಿಕೆ 45 ವಾರ್ಡ್ ಗಳಿಗೆ ಚುನಾವಣೆ‌ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. 4 ದಿನಗಳಾದರೂ, ನಾಮಪತ್ರ ಸಲ್ಲಿಕೆಯಲ್ಲಿ ಚುರುಕು ಪಡೆದಿಲ್ಲ. ಇನ್ನು ಪಕ್ಷಗಳ ಟಿಕೆಟ್ ಗಾಗಿ ಆಕಾಂಕ್ಷಿಗಳು ಹಗಲು ರಾತ್ರಿಯೆನ್ನದೆ ತೆರೆಮರೆ ಕಸರತ್ತು ನಡೆಸಿದ್ದಾರೆ.

ಮತ್ತೆ ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್

ಕಳೆದ ಬಾರಿ ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಗೆ ಮತ್ತೆ ಅಧಿಕಾರ ಉಳಿಸಿಕೊಂಡು ಅಧಿಪತ್ಯ ಸಾಧಿಸುವ ತವಕದಲ್ಲಿ ತಮ್ಮ ಹುರಿಯಾಳುಗಳನ್ನು ಕಣಕ್ಕಿಳಿಸುತ್ತಿದೆ. ಶಾಮನೂರು ಶಿವಶಂಕರಪ್ಪ ಅವರ ಮಗ ಎಸ್ ಎಸ್ ಮಲ್ಲಿಕಾರ್ಜುನ್ ಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವ ಹೊಣೆ ನೀಡಿದ್ದು ಅಳೆದು ತೂಗಿ ಆಭ್ಯರ್ಥಿಗಳ ಆಯ್ಕೆಗೆ ಸರಣಿ‌ ಸಭೆ‌ ನಡೆಸಿದ್ದಾರೆ. ಈ ಬಾರಿ ಅಧಿಕಾರ ನಮ್ಮದೇ ಎಂದು ಶಾಮನೂರು ಶಿವಶಂಕರಪ್ಪ ಬೀಗುತ್ತಿದ್ದಾರೆ.

ಇನ್ನೊಂದೆಡೆ ಬಿಜೆಪಿ ಜಿಲ್ಲಾ ಉಸ್ತುವಾರಿ ಸಚಿವ ಕೆ‌ಎಸ್ ಈಶ್ವರಪ್ಪ ನೇತೃತ್ವದಲ್ಲಿ ಶಾಸಕರೊಡಗೂಡಿ ಪಾಲಿಕೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು‌ ರಣತಂತ್ರರೂಪಿಸುತ್ತಿದ್ದಾರೆ.ಬಿಜೆಪಿ ಟಿಕೆಟ್ ಪಡೆಯಲು ದೊಡ್ಡ ಆಕಾಂಕ್ಷಿಗಳ ಪಟ್ಟಿಯೇ ಇದ್ದು 400 ಕ್ಕು‌ ಹೆಚ್ಚು ಜನ ಪಕ್ಷದ ಕಚೇರಿಗೆ ಟಿಕೇಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಶಾಸಕರಿಗೆ ವಾರ್ಡ್ ಹಂಚಿಕೆ

ಈಗಾಗಲೇ ಬಿಜೆಪಿಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ  ಈಶ್ವರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು,  ಶಾಮನೂರು ಸಮುದಾಯ‌ ಭವನದಲ್ಲಿ ಆಕಾಂಕ್ಷಿಗಳ ಸಭೆ ನಡೆಸಲಾಗಿದೆ.ಈ ಸಭೆಯಲ್ಲಿ ಬಿಜೆಪಿ ಶಾಸಕರಿಗೆ ವಾರ್ಡ್ ಗಳನ್ನು ಹಂಚಿಕೆ ಮಾಡಲಾಗಿದ್ದು, ಹಂಚಿಕೆಯಾದ ಆಯಾ ವಾರ್ಡ್ ಗೆಲ್ಲಿಸಿಕೊಂಡು ಬರುವುದನ್ನು ಶಾಸಕರಿಗೆ ವಹಿಸಲಾಗಿದೆ

ದಾವಣಗೆರೆ ದಕ್ಷಿಣ ಕ್ಷೇತ್ರದ ವಾರ್ಡ್ ಉಸ್ತುವಾರಿ

  • ಜಗಳೂರು ಶಾಸಕ ಎಸ್. ವಿ. ರಾಮಚಂದ್ರ ಶಾಸಕರು ಜಗಳೂರು – ವಾರ್ಡ್ 20 ಮತ್ತು 25
  • ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ – ವಾರ್ಡ್ 5, 6 ಮತ್ತು 7
  • ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ – ವಾರ್ಡ್ 14 18 ಮತ್ತು 19
  • ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ – ವಾರ್ಡ್ 1ಮತ್ತು 45
  • ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ  ಜೀವನಮೂರ್ತಿ – ವಾರ್ಡ್ 8 ಮತ್ತು 11
  • ಬಿಜೆಪಿ ಮುಖಂಡ ರಾಜನಹಳ್ಳಿ ಶಿವಕುಮಾರ್ – ವಾರ್ಡ್ ನಂಬರ್ 10
  • ಮಾಯಕೊಂಡ ಬಿಜೆಪಿ ಮುಖಂಡ ಹನುಮಂತನಾಯ್ಕ್ 12 13 ಮತ್ತು 21

ಟಿಕೆಟ್ ಹಂಚಿಕೆ ನಂತರ ಪಕ್ಷದಲ್ಲಿ ಗೊಂದಲವಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರೆ ಪಕ್ಷ ಹೆಚ್ಚು ಸೀಟ್ ಗೆಲ್ಲಲು ಕಷ್ವವಾಗುತ್ತದೆ. ಅದಕ್ಕಾಗಿ ಎಲ್ಲರನ್ನು ವಿಶ್ವಾಸಕ್ಕೆ ಪಡೆಯಲು ಸಭೆ ಮೇಲೆ‌ ಸಭೆಗಳನ್ನು ನಡೆಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top