ಡಿವಿಜಿಸುದ್ದಿ, ದಾವಣಗೆರೆ: ಇಡೀ ದೇಶದಲ್ಲಿ ಬಿಜೆಪಿ ಗೆಲುವಿನ ಯಾತ್ರೆ ಮುಂದುವರಿಸಿದ್ದು, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ ಗೆಲುವಿನ ಯಾತ್ರೆ ಮುಂದುವರಿಯಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ದಾವಣಗೆರೆಯಲ್ಲಿ ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾಗಳ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಈ ಬಾರಿ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗದ್ದುಗೆ ಏರಲಿದೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ಹೀನಾಯವಾಗಿದೆ. ಇನ್ನ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದೇಶ, ರಾಜ್ಯ ಮತ್ತು ಸ್ಥಳೀಯವಾಗಿ ಇತ್ತು, ಇತ್ತು, ಇತ್ತು ಎನ್ನುವ ಆಧಾರವಷ್ಟೇ ಉಳಿಯಲಿದೆ ಎಂದರು