ಡಿವಿಜಿ ಸುದ್ದಿ, ದಾವಣಗೆರೆ: ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ 40 ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಗೆಲುವ ಸಾಧಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶಾಸಕ ಪಿ.ಟಿ ಪರಮೇಶ್ವರ್ ನಾಯ್ಕ್ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಮಹಾ ನಗರಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಉತ್ತಮ ಕೆಲಸ ಮಾಡಿದೆ. ದಾವಣಗೆರೆ ನಗರದಕ್ಕೆ ಹೈಟೆಕ್ ಟಚ್ ಕೊಟ್ಟ ಕೀರ್ತಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಸಲ್ಲುತ್ತದೆ. ಜನ ಸಾಮಾನ್ಯರು ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಿದ್ದು, ಈ ಬಾರಿ ಕಾಂಗ್ರೆಸ್ 40 ಕ್ಕೈ ಹೆಚ್ಚು ವಾರ್ಡ್ ಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆ ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಅಭಿವೃದ್ಧಿಯಲ್ಲಿ ಮಾದರಿಯಾಗಿದೆ. ದಾವಣಗೆರೆ ಈ ಮಟ್ಟಕ್ಕೆ ಬೆಳೆಯಲು ಎಸ್.ಎಸ್ ಮಲ್ಲಿಕಾರ್ಜುನ ಅವರು ಕಾರಣ. ದಾವಣಗೆರೆ ಶಾಂತಿ, ಸಹಬಾಳ್ವೆ ಹೆಸರಾಗಿದ್ದು, ಇದಕ್ಕೆ ಪಕ್ಷದ ಹಿರಿಯರಾದ ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ ಕೊಡುಗೆ ಅಪಾರ. ಪಾಲಿಕೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳಿಗೆ ಆರ್ಶೀವಾದ ಮಾಡಬೇಕೆಂದು ಮಾಜಿ ಸಚಿವ ಪಿಟಿ ಪರಮೇಶ್ವರ್ ನಾಯ್ಕೆ ಜನರಲ್ಲಿ ಮನವಿ ಮಾಡಿಕೊಂಡರು.



