ಡಿವಿಜಿ ಸುದ್ದಿ, ದಾವಣಗೆರೆ: ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಹೇಳಿಕೆ ನೀಡಿಲ್ಲ, ಗೊಂದಲ ಸೃಷ್ಟಿ ಮಾಡಬೇಡಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆ ಹೇಳಿಕೆಯನ್ನು ಟ್ವಿಸ್ಟ್ ಮಾಡಿದ್ದಾರೆ. ನಾನು ಯಾರಿಗೆ ಸ್ಪಷ್ಟೀಕರಣ ನೀಡಬೇಕೋ ಅವರಿಗೆ ನೀಡುತ್ತೇನೆ. ಮಾಧ್ಯಮಗಳ ಮುಂದೆ ನಾನು ಏನನ್ನು ಹೇಳುವುದಿಲ್ಲ ಎಂದರು.
ನೀರಾವರಿ ಇಲಾಖೆ ವಿಚಾರದಲ್ಲಿ ನಾನು ಎಲ್ಲರ ಸಲಹೆ ಪಡೆಯುತ್ತೇನೆ. ಹೆಚ್. ಕೆ. ಪಾಟೀಲ್ ಅವರ ಮಾರ್ಗದರ್ಶನ ಪಡೆಯುತ್ತೇನೆ. ಈಗಾಗಲೇ ಸಮಿತಿ ವರದಿ ಬಂದ ನಂತರ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಸಿಗುತ್ತದೆ. ಈಗ ನಿಗಮ ಕೊಟ್ಟರೆ ಸಂತೋಷವಾಗುತ್ತದೆ ಎಂದರು.
ಮಹದಾಯಿ ವಿಷಯವಾಗಿ ನಾಳೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ. 26 ರಂದು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇವೆ. ಆದಷ್ಟು ಬೇಗ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ನಮ್ಮ ಸರ್ಕಾರ ಇರುವಾಗಲೇ ಆದಷ್ಟು ಬೇಗ ಜಾರಿಗೆ ತರುವಂತೆ ಆಗ್ರಹಿಸುತ್ತೇವೆ ಎಂದು ತಿಳಿಸಿದರು.



