ಡಿವಿಜಿ ಸುದ್ದಿ, ದಾವಣಗೆರೆ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ನಂಬಲು ಸಾಧ್ಯವಿಲ್ಲ. ಇಬ್ಬರ ಸಹವಾಸ ಸಾಕು. ಮುಂಬರುವ ಚುನಾವಣೆಯಲ್ಲಿ ಯವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳುತ್ತದೆ. 2018ರಲ್ಲಿ ಫಲಿತಾಂಶ ಹೊರಬಂದ ನಂತರ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ನನಗೆ ಇಷ್ಟ ಇರಲಿಲ್ಲ. ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಪಕ್ಷದವರೇ ನನ್ನನ್ನು ಸಂಪರ್ಕಿಸಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಮನವೊಲಿಸಿದರು ಎಂದರು.
ಈ ಎರಡು ರಾಷ್ಟ್ರೀಯ ಪಕ್ಷಗಳನ್ನು ಕಟ್ಟಿಕೊಂಡು ನಾನು ಏನು ಮಾಡಬೇಕಿಲ್ಲ. ಅಗತ್ಯವಿದ್ದಾಗ ಬಳಸಿಕೊಂಡು ತಮ್ಮ ಕೆಲಸವಾದ ನಂತರ ಬಿಸಾಡುತ್ತಾರೆ ಎಂದರು. ಬಿಜೆಪಿ ಬಗೆಗಿನ ಸಾಫ್ಟ್ ಕಾರ್ನರ್ ಬಗ್ಗೆ ಕೇಳಿದ್ದಕ್ಕೆ ಆಗೇನು ಇಲ್ಲ ಎಂದರು



