ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ವಿಚಾರಣೆ ಹಾಜರಾಗುವಂತೆ ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ನಮನ್ಸ್ ನೀಡಿದೆ. ಈ ಮೂಲಕ ತಿಹಾರ್ ಜೈಲು ವಾಸ ಅನುಭವಿಸಿ ಹೊರ ಬಂದಿರುವ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
ದೆಹಲಿ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಮೊದಲ ಬಾರಿ ಸಮನ್ಸ್ ನೀಡಿದ್ದು ಮತ್ತೆ ಡಿ.ಕೆ ಶಿವಕುಮಾರ್ ಮತ್ತೆ ಇಡಿ ಸುಳಿಯಲ್ಲಿ ಸಿಲುಕಿದಂತಾಗಿದೆ. ಜನವರಿ 13 ರಂದು ವಿಚಾರಣೆಗೆ ಹಾಜರಾಗುಂತೆ ಸಮನ್ಸ್ ನೀಡಿದೆ. 2013-2014ರ ಸಾಲಿನಲ್ಲಿ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇಡಿ ಸಮನ್ಸ್ ನೀಡಿದೆ.
ವಕೀಲ ಅಭಿಷೇಕ ಮನುಸಿಂಘ್ವಿ ಅವರನ್ನ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಸಮನ್ಸ್ ಕುರಿತು ಚರ್ಚೆ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವ ಬಗ್ಗೆ ಹಾಗೂ ಮುಂದಿನ ಕಾನೂನು ಹೋರಾಟ ಕುರಿತು ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.



