ಡಿವಿಜಿ ಸುದ್ದಿ, ಕಲಬುರಗಿ: ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಿಸುವ ಆಸೆ ಇದೆ. ಆದರೆ, ಕೇಂದ್ರದ ನಾಯಕರು ಯಾವ ರೀತಿಯಾಗಿ ಸೂಚಿಸುತ್ತಾರೋ ನೋಡಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ದೆಹಲಿಗೆ ಹೊರಟಿದ್ದು, ಪ್ರಧಾನಿ ಮೋದಿ ಮತ್ತು ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಅಭಿಪ್ರಾಯ ತೆಗೆದುಕೊಂಡು ನಂತರ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋದ ಮೇಲೆ ನಾಳೆ ಈ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಹಳಬರನ್ನು ಕೈ ಬಿಟ್ಟು, ಹೊಸಬರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು.
ಇದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ. ಅಲ್ಲದೆ ನಾಳೆ ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.



