ಡಿವಿಜಿ ಸುದ್ದಿ, ಬಳ್ಳಾರಿ: ಕಾಂಗ್ರೆಸ್ ಶಾಸಕ ನಾಗೇಂದ್ರ ನಮ್ಮ ಹೀರೋ, ಸ್ವಲ್ಪ ದಿನದಿಂದ ದೂರ ಇದ್ದಾರೆ. ಅವರು ಮತ್ತೆ ಬಿಜೆಪಿಗೆ ಬರುತ್ತಾರೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ .
ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಘನತ್ಯಾಜ್ಯ ಸಂಗ್ರಹಣಾ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದಿಕೆ ಮೇಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರು ನಮ್ಮ ಹೀರೋ, ಚಪ್ಪಾಳೆ ಹೊಡೆಯುದ್ದಕ್ಕೆ ಯಾಕೆ ಸಂಕೋಚಪಟ್ಟುಕೊಳ್ಳುತ್ತಿದ್ದೀರಾ..? ಜೋರಾಗಿ ಚಪ್ಪಾಳೆ ಹೊಡಿಯಿರಿ. ಮೊದಲು ಅವರು ನಮ್ಮ ಜೊತೆ ಇದ್ದರು. ಇದೀಗ ಬೇರೆ ಕಡೆ ಇದ್ದಾರೆ. ಆದಷ್ಟು ಬೇಗ ಕರೆಸಿಕೊಳ್ತೀವಿ ಎಂದರು.
ಈ ಹಿಂದೆ ಸಮ್ಮಿಶ್ರ ಸರ್ಕಾರ ಉರುಳಿದ ಸಂದರ್ಭದಲ್ಲಿ ಬಿಜೆಪಿ ಆಪರೇಷನ್ ಕಮಲದಲ್ಲಿ ನಾಗೇಂದ್ರ ಅವರ ಹೆಸರು ಕೂಡ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎನ್ನುವಂತೆ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ಧಾರೆ. ಈ ಮೂಲಕ ನಾಗೇಂದ್ರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸರ್ತಾರಾ ಅನ್ನೋ ಪ್ರಶ್ನೆ ಉದ್ಭವಿಸಿದೆ.