Connect with us

Dvgsuddi Kannada | online news portal | Kannada news online

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ..! ಹೀಗೆ ಕುಮಾರ ಸ್ವಾಮಿ ಟ್ವೀಟ್ ಮಾಡಿದ್ದು ಯಾಕೆ ಗೊತ್ತಾ..?

ಪ್ರಮುಖ ಸುದ್ದಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ..! ಹೀಗೆ ಕುಮಾರ ಸ್ವಾಮಿ ಟ್ವೀಟ್ ಮಾಡಿದ್ದು ಯಾಕೆ ಗೊತ್ತಾ..?

ಡಿವಿಜಿ ಸುದ್ದಿ, ಬೆಂಗಳೂರು:  ಮಂಗಳೂರು ಗಲಭೆ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯ ನಂತರ ಆಡಳಿತ ರೂಢ ಬಿಜೆಪಿ ವಿರುದ್ಧ ಕೆಂಡಕಾರುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇವತ್ತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ನನ್ನನ್ನು  ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ…! ನಿಮ್ಮ ಜೀನ್‌ಗಳು ಪಾಕಿಸ್ತಾನದಲ್ಲಿರಬಹುದು ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ಆದರೆ ನನ್ನ‌ ಜೀನ್‌ ಈ ಮಣ್ಣಿನಲ್ಲಿದೆ.

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು. ‘ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು’ ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯವಾಗಿದೆ ಎಂದಿದ್ದಾರೆ.

 

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಟೀಕಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top