ಡಿವಿಜಿಸುದ್ದಿ.ಕಾಂ , ಹರಿಹರ: ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಹೆಚ್.ಕೆ ಪಾಟೀಲ್ ಅವರನ್ನು ನೇಮಿಸಿವಂತೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ಎ. ಗೋವಿಂದ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್ ಒತ್ತಾಯಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕು. ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡುವುದರಿಂದ ಉತ್ತರ ಕರ್ನಾಟಕ ಭಾಗಕ್ಕೂ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರ ಸೇವೆಯನ್ನು ಸಲ್ಲಿಸಿದವರಿಗೆ ಆದ್ಯತೆ ನೀಡಿದಂತೆ ಆಗುತ್ತದೆ ಎಂದರು.
ಎಚ್ ಕೆ ಪಾಟೀಲ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ರಾಜಕಾರಣಿಯಾಗಿ ಸುದೀರ್ಘವಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಭಾಗಗಳಿಗೆ ಶುದ್ಧ ಕುಡಿಯುವ ಒದಗಿಸಿದ್ದ ಸರಳ ಸಜ್ಜನಿಕೆಯ ಧೀಮಂತ ನಾಯಕ ಎಚ್. ಕೆ. ಪಾಟೀಲ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಅರ್ಜುನ್ ಸಾ ಪವರ್, ರಾಮಚಂದ್ರ ಸಾ ಮೆಹರವಾಡೆ, ಆನಂದ ರೆಡ್ಡಿ, ರವಿ ನಂದಿಗಾವಿ ಇದ್ದರು.