ಡಿವಿಜಿ ಸುದ್ದಿ, ಬೆಂಗಳೂರು: ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಜನರು ಮುದ್ರೆ ಒತ್ತಿರುವುದಕ್ಕೆ ನನ್ನ ಮನದಾಳದ ಅಭಿನಂದನೆಗಳು ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಭಕೋರಿದ್ದಾರೆ.
ಇದೊಂದು ಅಸಹ್ಯ ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದಿದ್ದಾರೆ.
ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 9, 2019
15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೆಸ್ 2 ಸ್ಥಾನಗಳನ್ನು ಪಡೆದಿದ್ದು ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ.



