ಡಿವಿಜಿ ಸುದ್ದಿ, ಹರಿಹರ: ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಅರುಣ ಕುಮಾರ ಪೂಜಾರ ಅವರು ಹರಿಹರದ ಪಂಚಮಸಾಲಿ ಮಠಕ್ಕೆ ಭೇಟಿ ನೀಡಿ ಶ್ರೀ ವಚನಾನಂದ ಸ್ವಾಮೀಜಿಗಳ ಆರ್ಶೀವಾದ ಪಡೆದರು.
ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಬಜೆಟ್ ಸಿದ್ಧತೆಯಲ್ಲಿ ಮುಖ್ಯಮಂತ್ರಿಗಳಿದ್ದು, ಉತ್ತಮ ಆಡಳಿತದ ನೀಡುವುದು ನಮ್ಮ ಗುರಿಯಾಗಿದೆ ಎಂದರು.

ಇನ್ನು ವಿರೋಧ ಪಕ್ಷಗಳು ಜವಾಬ್ಧಾರಿಯುತವಾಗಿ ಕೆಲಸ ಮಾಡಲು ಜನತೆ ಸಂದೇಶ ನೀಡಿದ್ದಾರೆ. ಸೋತಾಗ ಹಣ ತೋಳ್ಬಲ ಎಂದು ಹೇಳುವುದು ಸರ್ವೆ ಸಾಮಾನ್ಯವಾಗಿರುತ್ತದೆ. ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಗಳು ಹಾಗು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಡಿಯೂರಪ್ಪ ಈಗಾಗಲೇ ಹೈಕಮಾಂಡ್ ಜೊತೆ ಸಂಪರ್ಕದಲ್ಲಿದ್ದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಈ ಸಂಧರ್ಭದಲ್ಲಿ ಶ್ರೀ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ, ಚಂದ್ರಶೇಖರ ಪೂಜಾರ ಹಾಗೂ ಕರಿಬಸಪ್ಪರವರು ಉಪಸ್ಥಿತರಿದ್ದರು.



