ಡಿವಿಜಿ ಸುದ್ದಿ, ಹುಬ್ಬಳ್ಳಿ:ಅನರ್ಹ ಶಾಸಕರಿಗೂ ನಮಗೂ ಸಂಬಂಧವಿಲ್ಲ. ಅವರ ರಕ್ಷಣೆಗೆ ನಾವು ಜವಾಬ್ದಾರಲ್ಲ ಎಂದು ಸಚಿವ ಜಗದೀಶ್ ಶೆಟ್ಟರು ಹೇಳಿದರು .
ಮಾಧ್ಯಮ ಜೊತೆ ಮಾತನಾಡಿದ ಅವರು, ಕೆಲವು ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ಅವರ ರಕ್ಷಣೆಯ ಹೊಣೆ ನಮ್ಮದಲ್ಲ. ಅನರ್ಹ ಶಾಸಕರು ವೈಯಕ್ತಿಕ ಕಾರಣಗಳಿಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ನಡೆಸಲು ಅನುಕೂಲವಾಯಿತು. ಹೀಗಾಗಿ ಅವರನ್ನು ರಕ್ಷಿಸುವ ಜವಾಬ್ದಾರಿ ನಮ್ಮದಲ್ಲ. ಅನರ್ಹರಿಗೂ ನಮ್ಮ ನಡುವೆ ಸಾಕಷ್ಟು ರಾಜಕೀಯ ಅಂತರವಿದೆ ಎಂದರು.
ಅನರ್ಹ ಶಾಸಕರು ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೇ ತಿಂಗಳು 5ರಂದು ತೀರ್ಪು ಬರುವ ಸಾಧ್ಯತೆಯಿದೆ. ಅವರು ಬಿಜೆಪಿ ಸೇರಿದಲ್ಲಿ ಉಪ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕೇ ಬೇಡವೇ ಎಂದು ಹೈಕಮಾಂಡ್ ನಿರ್ಧರಿಸಲಿದೆ. ಅನರ್ಹ ಶಾಸಕರಿಗೆ ಉಪ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲೂ ಹೇಳಿಲ್ಲ. ಅನರ್ಹರು ಸ್ವಂತ ಬಲದಿಂದ ಗೆದ್ದು ಬರುವಷ್ಟು ಶಕ್ತರಿದ್ದಾರೆ ಎಂದರು.



