ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ ಒಂದು ವರ್ಷ ಆಗಲಿದೆ. ಮೈತ್ರಿ ಸರ್ಕಾರ ಪತನವಾಗಿ ಒಂದು ವರ್ಷ ತುಂಬಿದ ನಂತರ ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ವಾಕ್ಸಮರ ಶುರುವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳದಿದ್ದರೆ 10 ಸ್ಥಾನ ಗೆಲ್ಲಬಹುದಿತ್ತು ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಸರಣಿ ಟ್ವೀಟ್ ಮೂಲಕ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ರಾಜ್ಯದಲ್ಲಿ 8 ಇಲ್ಲವೆ 10 ಸ್ಥಾನ ಗೆಲ್ಲಬಹುದಿತ್ತು ಎಂದು ಸಿದ್ದರಾಮಯ್ಯ ಅವರು ಇತ್ತೀಚಿಗೆ ಮೆಲುಕು ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ.
ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು.
ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು.
2/3— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 22, 2020
ಅವರ ಕನಸು–ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಮತ್ತು ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರು ಪದೇ ಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ಈಗ ನಾನು ಮೌನ ಮುರಿಯುಬೇಕಾಯಿತು ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ ಎಂದು ಕಿಡಿಕಾರಿದ್ದಾರೆ.
ಪಕ್ಷದ ಕಾರ್ಯಕರ್ತರಿಗೆ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಗೆದುಕೊಂಡಿದ್ದಾರೆ.ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ನನ್ನ ಸರ್ಕಾರ ಪತನಗೊಳಿಸುವ ವಿಷಯದಲ್ಲಿ ಒಳ ಸಂಚಿನ ಮೊರೆ ಹೋಗಿದ್ದರು ಎಂಬುದನ್ನು ಆ ದೊಡ್ಡ ನಾಯಕರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದಿದ್ದಾರೆ.ಕಾಂಗ್ರೆಸ್ ಜತೆ ಮೈತ್ರಿಗೆ ಜೆಡಿಎಸ್ ಎಂದೂ ಮುಂದಾಗಿರಲಿಲ್ಲ. ಮುಂದೆಯೂ ಕೂಡ ಮೈತ್ರಿಗೆ ನಾವು ಹಪಾಹಪಿಸುವುದಿಲ್ಲ ಎಂದಿದ್ದಾರೆ.