Connect with us

Dvg Suddi-Kannada News

ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಉನ್ನತ ಮಟ್ಟದ ತನಿಖೆ

ರಾಜಕೀಯ

ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಉನ್ನತ ಮಟ್ಟದ ತನಿಖೆ

ಡಿವಿಜಿ ಸುದ್ದಿ, ಹುಬ್ಬಳ್ಳಿ: ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯಕ್ಕೆ ಗುಂಪೊಂದು ನುಗ್ಗಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ಖಂಡಿಸಿದ್ದು, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಿಂದಿನಿಂದಲೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎನ್ನುವ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ  ಘರ್ಷಣೆ ನಡೆದಿರುವ ಸಾಧ್ಯತೆ ಇದ್ದು, ಈ ಬಗ್ಗೆ ತನಿಖೆ ನಡೆಯಲಿದೆ ಎಂದು ತಿಳಿಸಿದರು.

ಇದೊಂದು ಎರಡು ಗುಂಪುಗಳ ನಡುವಿನ ಘರ್ಷಣೆಯಂತೆ  ಕಂಡುಬಂದಿದೆ. ಆದರೆ, ಕಾಂಗ್ರೆಸ್‌ ಪಕ್ಷ,  ಈ ಘಟನೆ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದೆ. ಇಂತಹ ಹೇಳಿಕೆ ಸಣ್ಣತನ ರಾಜಕಾರಣ ಎಂದು ಟೀಕಿಸಿದರು.

.

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top