ಡಿವಿಜಿ ಸುದ್ದಿ, ಬೆಂಗಳೂರು: ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿಕೊಂಡಿದ್ದರಿಂದ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಉಂಟಾಯಿತು ಎಂದು ಕೆಪಿಸಿಸಿ ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿಯಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಸೋಲಾಯಿತು. ಇನ್ಮುಂದೆ ಯಾವ ಮೈತ್ರಿ ಇಲ್ಲದೆ. ಒಗ್ಗಟ್ಟಿನಿಂದ ಮುನ್ನಡೆಯಲಿದೆ ಎಂದರು.
ಪಕ್ಷವನ್ನು ಒಗ್ಗಟ್ಟಿನಿಂದ ಮುನ್ನೆಡೆಸುವ ಸಾಮರ್ಥ್ಯ ಡಿ.ಕೆ.ಶಿವಕುಮಾರ್ ಅವರಲ್ಲಿರುವ ಕಾರಣ, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದರು.



