ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜುಲೈ 2 ರಂದು ನಡೆಯಲಿದೆ.
ಕೊರೊನಾ ವೈರಸ್ ಹಿನ್ನೆಲೆ ಜೂನ್ 14 ರಂದು ನಿಗದಿಯಾಗಿದ್ದ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನೀಡಿಲ್ಲ ಎಂದು ಮುಂದೂಡಲಾಗಿತ್ತು.ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಪ್ರತಿಕ್ರಿಯಿಸಿ, ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಯಾವುದೇ ರೀತಿ ಅಡ್ಡಿ ಮಾಡಿಲ್ಲ. ಅವರು ಯಾವಾಗಬೇಕಾದರೂ, ಪದಗ್ರಹಣ ಸಮಾರಂಭ ಮಾಡಿಕೊಳ್ಳಲಿ ನಮ್ಮದೇನು ಅಭ್ಯಂತರ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಜುಲೈ 02 ರಂದು ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಸಮಾರಂಭ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಕೆಪಿಸಿಸಿ ನೂತನ ಕಚೇರಿಯಲ್ಲಿ ಜುಲೈ 02 ರಂದು ಪದಗ್ರಹಣ ಸಮಾರಂಭ ನಡೆಯಲಿದೆ. ಒಂದು ವೇಳೆ ಕೆಪಿಸಿಸಿ ಕಚೇರಿಯಲ್ಲಿ ಸಾಧ್ಯವಾಗದಿದ್ದರೆ, ಪರ್ಯಾಯವಾಗಿ ಗ್ಲೋಬಲ್ ಕಾಲೇಜಿನಲ್ಲಿ ಪದಗ್ರಹಣ ಸಮಾರಂಭಕ್ಕೆ ಸ್ಥಳ ನಿಗದಿ ಮಾಡಲಾಗಿದೆ. ಪದಗ್ರಹಣ ಸಮಾರಂಭದಲ್ಲಿ 15 ಲಕ್ಷ ಜನರನ್ನು 2, 800 ಸ್ಥಳದಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ಸೇರಿಸಿ ಪದಗ್ರಹಣ ಆಯೋಜಿಸಲು ತೀರ್ಮಾನಿಸಿದೆ