Connect with us

Dvgsuddi Kannada | online news portal | Kannada news online

ನನಗೆ ಇನ್ನು ರಾಜಕೀಯ ನಿವೃತ್ತಿಯ ವಯಸ್ಸಾಗಿಲ್ಲ : ಎಚ್.ಡಿ. ಕುಮಾರಸ್ವಾಮಿ

ಪ್ರಮುಖ ಸುದ್ದಿ

ನನಗೆ ಇನ್ನು ರಾಜಕೀಯ ನಿವೃತ್ತಿಯ ವಯಸ್ಸಾಗಿಲ್ಲ : ಎಚ್.ಡಿ. ಕುಮಾರಸ್ವಾಮಿ

 ಡಿವಿಜಿ ಸುದ್ದಿ, ಹಾಸನ: ನನಗೆ ಇನ್ನು ನಿವೃತ್ತಿಯಾಗುವ ರಾಜಕೀಯ ವಯಸ್ಸಾಗಿಲ್ಲ, ವೈರಾಗ್ಯ ಬಂದಿಲ್ಲ, ರಾಜ್ಯವನ್ನು ಮುನ್ನಡೆಸುವ ಆರೋಗ್ಯ ಇದ್ದು,  ಸಮಯಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಮೂಲಕ ರಾಜಕೀಯ ನಿವೃತ್ತಿ  ಊಹಾಪೋಹಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತೆರೆ ಎಳೆದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ತೆಗೆಯಲು ಹೋಗಲ್ಲ. ಯಾರಿಗೂ ಹೆದರಿ ಪಲಾಯನ ವಾದ ಮಾಡಲ್ಲ. ಈಗ ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಸ್ತೀನಿ.  ಅದಕ್ಕಾಗಿ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ ಎಂದ್ರು.

ಈಗಾಗಲೇ ನನ್ನ  ನಮ್ಮ ಕುಟುಂಬದವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಇದರ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಜನರಿಗೆ ಎಲ್ಲವೂ ಗೊತ್ತಿದೆ. ನಾನು ಥೂ, ಛೀ ಎನಿಸಿಕೊಂಡು ರಾಜಕೀಯ ಮಾಡಲ್ಲ, ಅಷ್ಟು ಸುಲಭವಾಗಿ ರಾಜಕೀಯ ಬಿಟ್ಟು  ಹೋಗಲ್ಲ, ಜನರ ಪ್ರೀತಿ ಇರುವವರೆಗೆ ರಾಜಕೀಯದಲ್ಲಿ ಮುಂದುವರಿಯುವೆ ಎಂದು ತಿಳಿಸಿದರು.

ಸಂಕ್ರಾಂತಿ ನಂತರ ಕ್ರಾಂತಿಕಾರಿ ಬದಲಾವಣೆ

ನಮ್ಮ ಪಕ್ಷ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ನೆಲೆಯೂರಬೇಕಿದೆ. ಇದಕ್ಕಾಗಿ ಪಕ್ಷ ಸಂಘಟನೆಗೆ ಒತ್ತು ನೀಡಲು ಪಕ್ಷದ ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಕ್ರಾಂತಿ ನಂತರ ಕ್ರಾಂತಿಕಾರಿ ಬದಲಾವಣೆ ನಡೆಯಲಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top