Connect with us

Dvgsuddi Kannada | online news portal | Kannada news online

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಸಿಎಂ : ಡಿಸಿಎಂ ಲಕ್ಷ್ಮಣ್ ಸವದಿ

ರಾಜಕೀಯ

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಸಿಎಂ : ಡಿಸಿಎಂ ಲಕ್ಷ್ಮಣ್ ಸವದಿ

ಡಿವಿಜಿ ಸುದ್ದಿ, ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಒಂದು ವರ್ಷ ತುಂಬುತ್ತಲೇ ನಾಯಕತ್ವ ಬದಲಾವಣೆ ಚರ್ಚೆ ಶುರುವಾಗಿತ್ತು. ಇನ್ನು  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಭೀಟಿ ನೀಡಿದ್ದು ಕುತೂಹಲ ಮೂಡಿತ್ತು. ಇದೀಗ ಈ ಬಗ್ಗೆ   ಸ್ವತಃ ಸವದಿ ಪ್ರತಿಕ್ರಿಯೆ ನೀಡಿದ್ದು, ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಮೂರು ವರ್ಷ ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಟ್ಟಿರುವ ಸವದಿ ಸುದ್ದಿಗಾರರ ಜೊತೆ ಮಾತನಾಡಿ, ನಾನು ಮುಖ್ಯಮಂತ್ರಿ ಹುದ್ದೆ ರೇಸ್ ನಲ್ಲಿದ್ದೇನೆ ಎಂಬ ವರದಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಕುರಿತು ವದಂತಿ ಹರಡಲಾರಂಭಿಸಿತು. ಅದರಲ್ಲಿ ಸತ್ಯ ಇಲ್ಲ. ಇಲಾಖೆ ಕೆಲಸಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೇನೆ. ಯಡಿಯೂರಪ್ಪ ನಮ್ಮ ನಾಯಕರು. ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಆಗಿ ಇರಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಾಧನೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು  ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top