ಡಿವಿಜಿ ಸುದ್ದಿ, ದಾವಣಗೆರೆ: ಕುರುಬ ಸಮಾಜದ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಚಿವ ಮಾಧುಸ್ವಾಮಿ ಪ್ರತಿಕೃತಿ ದಹಿಸಿ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಜಯದೇವ ವೃತ್ತದ ಬಳಿ ಜಮಾಯಿಸಿದ ವಿದ್ಯಾರ್ಥಿಗಳು ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಸಚಿವರನ್ನು ಈ ಕೂಡಲೇ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಸಚಿವರ ಪ್ರತಿಕೃತಿ ದಹಿಸಿದರು.



