ಡಿವಿಜಿ ಸುದ್ದಿ, ನವದೆಹಲಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ನಾಳೆ (ಬುಧವಾರ) ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ತಕ್ಷಣವೇ ಹಂಗಾಮಿ ಸ್ಪೀಕರ್ ನೇಮಕವಾಗಬೇಕು. ವಿಶ್ವಾಸಮತ ಸಾಬೀತು ಮಾಡುವ ದೃಶ್ಯಗಳನ್ನು ಚಿತ್ರೀಕರಿಸಬೇಕು. ಬಹುಮತದ ಸಂಪೂರ್ಣ ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನೋಡಿಕೊಳ್ಳಬೇಕು. ಬಹುಮತ ಸಾಬೀತು ಪ್ರಕ್ರಿಯೆ ನೇರಪ್ರಸಾರ ಆಗಬೇಕು ಮತ್ತು ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಇದ ವೇಳೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ಬಿಹಾರ ಮತ್ತು ಉತ್ತರಾಖಂಡ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ ನ್ಯಾಯಧೀಶರು ಮಧ್ಯಾಂತರ ಆದೇಶ ನೀಡಿದ್ದಾರೆ.
ಸೋಮವಾರ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎನ್‍ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಇಂದು ಬೆಳಗ್ಗೆ 10.30ಕ್ಕೆ ತೀರ್ಪನ್ನ ಕಾಯ್ದಿರಿಸಿತ್ತು. ಈ ತೀರ್ಪಿನಿಂದ ಬಿಜೆಪಿ ಬಹುಮತ ಸಾಬೀತುಪಡಿಸಬೇಕಾದ ಅನಿರ್ವಾರ್ಯತೆಯಲ್ಲಿ ಸಿಲುಕಿದೆ. ಡಿಸಿಎಂ ಅಜಿತ್ ಪವಾರ್ ತಮ್ಮ ಬಳಿ 22 ಶಾಸಕ ಬೆಂಬಲವಿದೆ ಎಂದು ಹೇಳಿಕೊಂಡಿದ್ದ ಅಜಿತ್ ಪವಾರ್ ಏಕಾಂಗಿಯಾಗಿದ್ದಾರೆ. ನಿನ್ನೆ ಎನ್ ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಜಂಟಿಯಾಗಿ ಮಾಧ್ಯಮ ಮುಂದೆ 162 ಸದಸ್ಯರ ಬೆಂಬಲ ಇದೆ ಎಂದು ಸಾಬೀತುಪಡಿಸಿತ್ತು. ಅದರಲ್ಲೂ ಎಲ್ಲಾರು ಶಪಥ ಬೇರೆ ಮಾಡಿದ್ದರು. ಇದು ಮುಖ್ಯಮಂತ್ರಿ ಫಡ್ನವೀಸ್ ಮತ್ತು ಡಿಸಿಎಂ ಅಜಿತ್ ಪವಾರ್ ಗೆ ನುಂಗಲಾರದ ತುತ್ತಾಗಿದೆ.
ಇನ್ನೊಂದೆಡೆ ಸುಪ್ರೀಂ ಕೋರ್ಟ್ ತೀರ್ಪ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಚಂದ್ರಕಾಂತ್ ಪಾಟೀಲ್, ನಾವು ತೀರ್ಪನ್ನು ಗೌರವಿಸುತ್ತೇವೆ. ನಾಳೆ ಬಹುಮತ ಸಾಬೀತುಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



