ಡಿವಿಜಿ ಸುದ್ದಿ, ಹುಬ್ಬಳ್ಳಿ: ಉಪ ಚುನಾವಣೆ ಫಲಿತಾಂಶದ ನಂತರ ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದ ಸಿದ್ದರಾಮಯ್ಯರ ಜ್ಯೋತಿಷ್ಯಾಲಯ ಮುಚ್ಚಿಹೋಗಿದ್ದು, ಅವರೊಬ್ಬ ಬುರುಡೆ ಸಿದ್ದರಾಮಯ್ಯ ಎಂದು ಕಂದಾಯ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉಪ ಚುನಾವಣೆ ಪ್ರಚಾರದದಲ್ಲಿ 15 ಕ್ಕೆ 15 ಕ್ಷೆತ್ರ ಕಾಂಗ್ರೆಸ್ ಗೆಲ್ಲುತ್ತೆ, ಚುನಾವಣೆ ನಂತರ ಬಿಜೆಪಿ ಮನೆಗೆ ಹೋಗಲಿದೆ ಎಂದು ಭವಿಷ್ಯ ನುಡಿದಿದ್ದರು. ಈಗ ಅವರ ಭವಿಷ್ಯವೇ ಡೋಲಾಯಮಾನವಾಗಿದೆ ಎಂದ್ರು.
ಕಾಂಗ್ರೆಸ್‌ನ ಒಂದು ಗುಂಪು ಸಿದ್ದರಾಮಯ್ಯರನ್ನು ತೆಗೆದುಹಾಕಲು ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿಯೇ ಮುಂದುವರಿಯಬೇಕು. ಅವರು ಯಾವುದೇ ಪಕ್ಷಕ್ಕೆ ಹೋದರೂ ಪಕ್ಷವನ್ನು ಇಬ್ಭಾಗ ಮಾಡ್ತಾರೆ. ಈಗಾಗಲೇ ಕಾಂಗ್ರೆಸ್ ಮೂರು ಭಾಗವಾಗಿ ಮಾಡಿ, ನಮಗೆ ಅನುಕೂಲ ಮಾಡಿದ್ದಾರೆ ಎಂದರು.
ಶರತ್ ಬಚ್ಚೇಗೌಡ ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ
ಪಕ್ಷ ತೊರೆದು ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಶರತ್ ಬಚ್ಚೇಗೌಡ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಈ ಕುರಿತು ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ ಅವರ ಸೋಲಿಗೆ ಸಂಸದ ಬಿ.ಎನ್. ಬಚ್ಚೇಗೌಡ ಅವರೇ ಕಾರಣ. ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸದೆ ತಟಸ್ಥವಾಗಿದ್ದರು. ಇದನ್ನು ವರಿಷ್ಠರು ಗಮನಿಸಿದ್ದು, ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.



